ಗೋದಾಮಿನಲ್ಲಿ ಹೊತ್ತಿಕೊಂಡ ಬೆಂಕಿ  
ರಾಜ್ಯ

ಬೆಂಗಳೂರಿನಲ್ಲಿ ಅಗ್ನಿ ಅವಘಡ: ಪ್ಲಾಸ್ಟಿಕ್ ಗೋದಾಮಿನಲ್ಲಿ ಬೆಂಕಿ, 50ಕ್ಕೂ ಹೆಚ್ಚು ವಾಹನಗಳು ಸುಟ್ಚು ಭಸ್ಮ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ.

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಗರದ ನಾಯಂಡಹಳ್ಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿದೆ.

ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಕೆನ್ನಾಲಿಗೆ ವ್ಯಾಪಿಸಿ ಗೋಡೌನ್ ಪಕ್ಕ ಇರಿಸಿದ್ದ ಮೂವತ್ತಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು ಸಾಗಿಸುವ ವಾಹನಗಳು ಸುಟ್ಟು ಹೋಗಿದೆ. ಸುದ್ದಿ ತಿಳಿದು ಕೂಡಲೇ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾದರು.

ರಿಜ್ವಾನ್ ಎಂಬುವವರ ಮಾಲೀಕತ್ವದ ಗೋಡೌನ್‌ನ ಒಂದು ಭಾಗದ ಖಾಲಿ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇದರಿಂದಾಗಿ ವಾಹನಗಳು ಸುಟ್ಟು ಹೋಗಿವೆ. ಅಕ್ಕಪಕ್ಕದಲ್ಲೂ ಹತ್ತಾರು ಪ್ಲಾಸ್ಟಿಕ್ ಗೋಡೌನ್ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ವೇಗದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಲೋಕಭವನಕ್ಕೆ ಆಗಮಿಸಿದ ಸಿದ್ದರಾಮಯ್ಯ, ಶೀಘ್ರದಲ್ಲೇ ರಾಜೀನಾಮೆ

ಮುಂದಿನ CM ಡಿಕೆ.ಶಿವಕುಮಾರ್: ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಅಂದು-ಇಂದು-ಎಂದೆಂದೂ ಒಗ್ಗಟ್ಟೇ ನಮ್ಮ ಶಕ್ತಿ- ಕಾಂಗ್ರೆಸ್

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಕಣ್ಣೀರು ಹಾಕಿದ ಸಚಿವ ಸಂತೋಷ್ ಲಾಡ್; Video

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ನಿರ್ಗಮನ: ಕರ್ನಾಟಕದಲ್ಲಿ ಕಾಂಗ್ರೆಸ್‌ನ 'ಅಹಿಂದ ಮತಬ್ಯಾಂಕ್' ಮೇಲೆ ಪರಿಣಾಮ?

SCROLL FOR NEXT