ಮೆಟ್ರೋ ರೈಲು 
ರಾಜ್ಯ

ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್: ಮೆಜೆಸ್ಟಿಕ್–ಗರುಡಾಚಾರ್‌ಪಾಳ್ಯ​ ನಡುವೆ 3 ನಿಮಿಷಕ್ಕೊಮ್ಮೆ ಮೆಟ್ರೋ ರೈಲು ಸಂಚಾರ

ಮೆಜೆಸ್ಟಿಕ್‌ನಿಂದ ಗರುಡಾಚಾರ್‌ಪಾಳ್ಯ ನಡುವಿನ ಜನ ದಟ್ಟನೆಯನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಮೆಟ್ರೋ ಈ ಭಾಗದಲ್ಲಿ 3 ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಲು ಬಿಎಂಆರ್ ಸಿಎಲ್ ಮುಂದಾಗಿದೆ.

ಬೆಂಗಳೂರು: ಮೆಜೆಸ್ಟಿಕ್‌ನಿಂದ ಗರುಡಾಚಾರ್‌ಪಾಳ್ಯ ನಡುವಿನ ಜನ ದಟ್ಟನೆಯನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಮೆಟ್ರೋ ಈ ಭಾಗದಲ್ಲಿ 3 ನಿಮಿಷಕ್ಕೊಮ್ಮೆ ಮೆಟ್ರೋ ಸೇವೆ ಒದಗಿಸಲು ಬಿಎಂಆರ್ ಸಿಎಲ್ ಮುಂದಾಗಿದೆ.

ಹೆಚ್ಚು ಜನ ದಟ್ಟನೆ ಇರುವ ಪೀಕ್ ಆವರ್​ಗಳಲ್ಲಿ ಪ್ರತಿ‌ ಮೂರು ನಿಮಿಷಕ್ಕೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಸೋಮವಾರದಿಂದ ಬೆಳಿಗ್ಗೆ 8.45 ರಿಂದ 10.20ರವರೆಗೆ ಮೆಜೆಸ್ಟಿಕ್ ಮತ್ತು ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಆರಂಭಿಸಲಿದೆ. ಈ ಮಾರ್ಗದಲ್ಲಿ 8.45 ರಿಂದ 10.20 ರವರೆಗೆ ಇನ್ಮುಂದೆ ಮೂರು ನಿಮಿಷಕ್ಕೊಮ್ಮೆ ಮೆಟ್ರೋ ರೈಲುಗಳು ಓಡಾಟ ನಡೆಸಲಿವೆ.

ಪೀಕ್ ಆವರ್​ಗಳಲ್ಲಿ ಪ್ರಯಾಣಿಕರಿಗೆ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ಒದಗಿಸಲು ನಮ್ಮ‌ ಮೆಟ್ರೋ ಮುಂದಾಗಿದೆ. ಬೈಯಪ್ಪನಹಳ್ಳಿಯಿಂದ‌ ಕೆಆರ್​ ಪುರಗೆ ಮೆಟ್ರೋ ಸಂಪರ್ಕವಾದ ಮೇಲೆ ಮೆಟ್ರೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಹೆಚ್ಚುವರಿ ರೈಲನ್ನು ಓಡಿಸಿ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ​ಗೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದ್ದರು.

ಇನ್ನು ಶನಿವಾರ, ಭಾನುವಾರ ಮತ್ತು ರಜಾದಿನಗಳನ್ನು ಹೊರತುಪಡಿಸಿ ಇನ್ನುಳಿದ ದಿನಗಳಲ್ಲಿ ಈ ಸೇವೆ ಇರಲಿದೆ. ಇದರಿಂದ ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್​ಪುರ ಕಡೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇದೇ ವೇಳೆ ಇಂಟರ್‌ಸಿಟಿ ಬಸ್‌ಗಳ ಪ್ರಯಾಣಿಕರ ಅನುಕೂಲಕ್ಕಾಗಿ ಬೆಳಿಗ್ಗೆ 5 ಗಂಟೆಯಿಂದ ರೈಲು ಸೇವೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಎಲ್ಲಾ ದಿಕ್ಕುಗಳಿಗೆ ಮೊದಲ ರೈಲಿನ‌ ಸೇವೆ 5 ಗಂಟೆಗೆ ಆರಂಭವಾಗಲಿದ್ದು, ಭಾನುವಾರ ಹೊರತುಪಡಿಸಿ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ, 5.00 ಗಂಟೆಗೆ ಮೆಟ್ರೋ ಸೇವೆ ಆರಂಭವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್