ಡಿಕೆ ಶಿವಕುಮಾರ್, ಶರಣ ಪ್ರಕಾಶ್ ಪಾಟೀಲ್ ಮತ್ತಿತರರು 
ರಾಜ್ಯ

ಬೆಂಗಳೂರು: ಫೆ.29 ರಿಂದ ಮಾ.9 ರವರೆಗೆ ಸರಸ್ ಮೇಳ!

ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ.

ಬೆಂಗಳೂರು: ಮಹಿಳೆಯರ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಏಕೈಕ ಉದ್ದೇಶದಿಂದ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಇದೇ ತಿಂಗಳ 29ರಿಂದ ಮಾ.9ರವರೆಗೆ ರಾಷ್ಟ್ರೀಯ ಸಾರಸ್ ಮೇಳ ಮತ್ತು ಬೃಹತ್ ರಾಷ್ಟೀಯ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜನೆ ಮಾಡಲಾಗಿದೆ.

ಈ ಸಂಬಂಧ ಶುಕ್ರವಾರ ವಿಕಾಸಸೌಧದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಶಾಸಕರಾದ ಎಸ್.ಟಿ.ಸೋಮಶೇಖರ್, ಶ್ರೀನಿವಾಸ್ ಸೇರಿದಂತೆ ಮತ್ತಿತರ ಅಧಿಕಾರಿಗಳು,ನಮ್ಮ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಬೃಹತ್ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಇದೇ ತಿಂಗಳ 29ರಿಂದ ಮಾ.9ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ರಾಷ್ಟ್ರೀಯ ಸರಸ್ ಮೇಳವು ರಾಷ್ಟ್ರೀಯ ಮಟ್ಟದ ಕಾರ್ಯಕ್ರಮವಾಗಿದ್ದು, ಇದರಲ್ಲಿ ದೇಶಾದ್ಯಂತದ 250 ಸ್ವ-ಸಹಾಯ ಗುಂಪುಗಳು ಭಾಗವಹಿಸಲಿವೆ. ಗುಂಪುಗಳು ಉತ್ಪಾದಿಸಿದ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸುತ್ತವೆ.

ಈ ಕಾರ್ಯಕ್ರಮವು ಕರ್ನಾಟಕದಾದ್ಯಂತ ವಿವಿಧ ರೀತಿಯ ಕರಕುಶಲ ವಸ್ತುಗಳನ್ನು ಮತ್ತು ವಿವಿಧ ರೀತಿಯ ಆಹಾರ ಉತ್ಪನ್ನಗಳನ್ನು ಪ್ರದರ್ಶಿಸುತ್ತದೆ. ಕಾರ್ಯಕ್ರಮವು ವಿವಿಧ ಗಣ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಒಳಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.

ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಮತ್ತಿತರರು ಉದ್ಘಾಟಿಸಲಿದ್ದಾರೆ. ಸರ್ಕಾರ ಈ ಮೇಳಕ್ಕೆ ವಿಶೇಷವಾದ ಒತ್ತು ಕೊಟ್ಟಿದೆ. ಏಕೆಂದರೆ ಬದಲಾವಣೆಯಾಗುವುದಾದರೆ ಅದು ಮಹಿಳೆಯರಿಂದ ಸಾಧ್ಯ ಎಂಬುದು ನಮ್ಮ ಸರ್ಕಾರಕ್ಕೆ ಅರ್ಥವಾಗಿದೆ. ಹಾಗಾಗಿ ಇದಕ್ಕೆ ವಿಶೇಷ ಒತ್ತು ಕೊಟ್ಟಿದ್ದೇವೆ ಎಂದು ಪಾಟೀಲ್ ತಿಳಿಸಿದರು.

ಬೃಹತ್ ಉದ್ಯೋಗ ಮೇಳ: ಈಗಾಗಲೇ ನಿಗದಿಯಾಗಿರುವಂತೆ ಬೆಂಗಳೂರಿನ ಅರಮನೆ ಮೈದಾನದಲ್ಲಿ 22 ದಿನಗಳ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಒಂದೇ ಸೂರಿನಡಿ ಉದ್ಯೋಗ ಕಲ್ಪಿಸಿಕೊಡುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ನಮ್ಮ ಸಿದ್ದತೆಗಳು ಮುಕ್ತಾಯ ಹಂತದಲ್ಲಿದೆ ಎಂದು ಮಾಹಿತಿ ನೀಡಿದರು.

ಡಿ.ಕೆ.ಶಿವಕುಮಾರ್ ಮಾತನಾಡಿ, ಈ ರೀತಿಯ ಕರಕುಶಲ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಇಡೀ ವರ್ಷ ನಡೆಯಲು ಅನುಕೂಲವಾಗುವಂತೆ ಶಾಶ್ವತ ಪ್ರದರ್ಶನ ಕೇಂದ್ರಕ್ಕೆ ಸ್ಥಳಾವಕಾಶ ಕಲ್ಪಿಸಲು ಹುಡುಕಾಟ ನಡೆಯುತ್ತಿದೆ. ಬ್ರಾಂಡ್ ಬೆಂಗಳೂರು ಅಭಿಯಾನದಡಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಲಾಗಿತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT