ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆಯಲ್ಲಿ ಭೀಕರ ಅಪಘಾತ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ, ಮೂವರ ದುರ್ಮರಣ

ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ದಾವಣಗೆರೆ: ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮೃತಪಟ್ಟವರೆಲ್ಲರೂ ಆಂಧ್ರ ಮೂಲದವರಾಗಿದ್ದಾರೆಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹುಬ್ಬಳ್ಳಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಮೃತಪಟ್ಟವರು ಆಂಧ್ರ ಮೂಲದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಸಿಂಗರಾಜನಹಳ್ಳಿ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹಾವೇರಿ ಜಿಲ್ಲೆ ಬ್ಯಾಡಿಗೆಯಿಂದ ಮೆಣಸಿನಕಾಯಿ ಖರೀದಿಗೆ ತೆರಳಿ ವಾಪಸ್ ಬರುವ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿ

ಈ ನಡುವೆ ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಓರ್ವ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ನಡೆದಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮೃತ ಯುವಕನನ್ನು ದಾಸರಹಳ್ಳಿಯ ರಾಜೀಶ್(18) ಎಂದು ಗುರ್ತಿಸಲಾಗಿದೆ. ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್​ನ ಕೆಂಪರಾಜು, ತರುಣ್​ಗೂ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

Assam: ಸಫಾರಿ ಜೀಪ್ ಮೇಲೆ Rhino ದಾಳಿ, ಒಂದೇ ಹೊಡೆತಕ್ಕೆ ಟೈರ್ ಛಿದ್ರ, ವಾಹನವನ್ನೇ ಉರುಳಿಸಲು ಯತ್ನ, Video Viral

IPL 2026: RCB vs PBKS ಪಂದ್ಯದಲ್ಲಿ ಎರಡು ದೊಡ್ಡ ದಾಖಲೆ ನಿರ್ಮಿಸಿದ Virat Kohli

SCROLL FOR NEXT