ಬಿಬಿಎಂಪಿ ಕಚೇರಿ (ಸಂಗ್ರಹ ಚಿತ್ರ) 
ರಾಜ್ಯ

ಬಿಬಿಎಂಪಿ ಬಜೆಟ್‌ ಫೆ.29 ಕ್ಕೆ; ಸತತ ನಾಲ್ಕನೇ ಬಾರಿ ಅಧಿಕಾರಿಗಳಿಂದಲೇ ಆಯವ್ಯಯ ಮಂಡನೆ

ಫೆಬ್ರವರಿ 29 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 2024-25ನೇ ಸಾಲಿನ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್.

ಬೆಂಗಳೂರು: ಫೆಬ್ರವರಿ 29 ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ 2024-25ನೇ ಸಾಲಿನ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಸತತ ನಾಲ್ಕನೇ ಬಾರಿ ಅಧಿಕಾರಿಗಳೇ ಆಯವ್ಯಯ ಮಂಡಿಸುತ್ತಿದ್ದಾರೆ.

ಬಿಬಿಎಂಪಿಯ ಹಣಕಾಸು ವಿಭಾಗದ ವಿಶೇಷ ಆಯುಕ್ತ ಶಿವಾನಂದ್‌ ಕಲಕೇರಿ ಅವರು ಇದೇ ಗುರುವಾರ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ 12ರಿಂದ 13 ಸಾವಿರ ಕೋಟಿ ರುಪಾಯಿ ಗಾತ್ರದ ಬಜೆಟ್‌ ಮಂಡನೆಯಾಗುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣಾ ವೇಳಾ ಪಟ್ಟಿ ಮಾರ್ಚ್‌ ಮೊದಲ ವಾರ ಪ್ರಕಟವಾಗುವುದರೊಂದಿಗೆ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಹಿನ್ನೆಲೆಯಲ್ಲಿ ಗುರುವಾರ ಬಜೆಟ್‌ ಮಂಡನೆಗೆ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

2023-24ನೇ ಸಾಲಿನಲ್ಲಿ 11,158 ಕೋಟಿ ರೂ. ಆದಾಯ ನಿರೀಕ್ಷೆ ಇಟ್ಟುಕೊಂಡು 11,157 ಕೋಟಿ ರೂ. ವೆಚ್ಚದ ಯೋಜನೆಗಳನ್ನು ಘೋಷಣೆ ಮಾಡಿತ್ತು. ರಾಜ್ಯ ಸರ್ಕಾರ ಇನ್ನಷ್ಟು ಅನುದಾನ ನೀಡುವುದಾಗಿ ತಿಳಿಸಿ ಪಾಲಿಕೆ ಬಜೆಟ್‌ ಗಾತ್ರವನ್ನು 11,885 ಕೋಟಿ ರೂ.ಗೆ ಹೆಚ್ಚಿಸಿತ್ತು. ಈ ವರ್ಷ ಹೆಚ್ಚಿನ ಆದಾಯ ನಿರೀಕ್ಷಿಸಿ ಬಜೆಟ್‌ ಗಾತ್ರವನ್ನು 12 ಸಾವಿರ ಕೋಟಿಯಿಂದ 13 ಸಾವಿರ ಕೋಟಿ ರೂ. ಆಸುಪಾಸಿನಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.

ಸತತ 4ನೇ ಬಾರಿ ಅಧಿಕಾರಿಗಳಿಂದ ಬಜೆಟ್‌

ಬಿಬಿಎಂಪಿಯ ಚುನಾಯಿತ ಕೌನ್ಸಿಲರ್‌ಗಳ ಅವಧಿ ಅಂತ್ಯಗೊಂಡು ಮೂರೂವರೆ ವರ್ಷ ಕಳೆದಿದ್ದು, ಈವರೆಗೆ ಚುನಾವಣೆ ನಡೆಸಿಲ್ಲ. ಹಾಗಾಗಿ, ಸತತ ನಾಲ್ಕನೇ ವರ್ಷವೂ ಅಧಿಕಾರಿಗಳೇ ಆಯವ್ಯಯ ಮಂಡಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ