ಘಟನಾ ಸ್ಥಳದಲ್ಲಿ ಪೊಲೀಸರು 
ರಾಜ್ಯ

ಬೆಂಗಳೂರು: ಡ್ರಮ್ ನಲ್ಲಿ ತುಂಡು, ತುಂಡಾಗಿ ವೃದ್ಧೆಯ ಮೃತದೇಹ ಪತ್ತೆ! ಇಬ್ಬರು ವಶಕ್ಕೆ

ಬೆಂಗಳೂರು: ನಗರದಲ್ಲಿ ವೃದ್ದೆಯೊಬ್ಬರವನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಶವವನ್ನು ಐದು ತುಂಡುಗಳಾಗಿ ಕತ್ತರಿಸಿ ಪ್ಲಾಸ್ಟಿಕ್ ಡ್ರಮ್‌ನಲ್ಲಿ ತುಂಬಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಈ ಪ್ರಕರಣ ವರದಿಯಾಗಿದೆ. ಮೃತರನ್ನು ಸುಶೀಲಮ್ಮ (65) ಎಂದು ಗುರುತಿಸಲಾಗಿದೆ. ಸಂಜೆ 5 ಗಂಟೆ ಸುಮಾರಿಗೆ ಡ್ರಮ್‌ನಿಂದ ದುರ್ವಾಸನೆ ಬರಲಾರಂಭಿಸಿದ ಹಿನ್ನೆಲೆಯಲ್ಲಿ ಸಮೀಪದ ನಿವಾಸಿಗಳು ಅದನ್ನು ಪರಿಶೀಲಿಸಿದಾಗ ದೇಹದ ಮೇಲ್ಭಾಗವು ಹಾಗೇ ಇದ್ದು, ಕೈಗಳು ಮತ್ತು ಕಾಲುಗಳನ್ನು ನಿಖರವಾಗಿ ಕತ್ತರಿಸಲ್ಪಟ್ಟಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಸಂಜೆ ಮತ್ತು ಮಧ್ಯರಾತ್ರಿಯ ನಡುವೆ ಮಹಿಳೆಯನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ಶಂಕೆ ವ್ಯಕ್ತಪಡಿಸಿವೆ. ಕೆಆರ್ ಪುರಂನ ನಿಸರ್ಗ ಲೇಔಟ್‌ನಲ್ಲಿರುವ ತಮ್ಮ ಮನೆಯಲ್ಲಿ ಶನಿವಾರ ಬೆಳಗ್ಗೆ ಸುಶೀಲಮ್ಮ ತಮ್ಮ ಮಗಳೊಂದಿಗೆ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು. ಸುಶೀಲಮ್ಮ ಮನೆಯವರಿಗೆ ತಿಳಿಸದೆ ಸ್ವಲ್ಪ ಹೊತ್ತು ಮನೆ ಬಿಟ್ಟು ನಂತರ ವಾಪಸ್ಸಾಗುವ ಅಭ್ಯಾಸ ಹೊಂದಿದ್ದರು. ಶನಿವಾರ ಅವರು ಕಣ್ಮರೆಯಾದಾಗ , ಅದೇ ರೀತಿ ಇರಬಹುದೆಂದು ಕುಟುಂಬಸ್ಥರು ಅಂದುಕೊಂಡಿದ್ದರು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಿದ್ದೇವೆ, ಆದರೆ ಈ ಹಂತದಲ್ಲಿ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಆರ್ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ಮಹಿಳೆ ಬಿಜೆಪಿ ಕಾರ್ಯಕರ್ತೆ: ಮೃತ ಮಹಿಳೆ ಬಿಜೆಪಿ ಕಾರ್ಯಕರ್ತೆ ಎಂಬುದು ತನಿಖೆ ವೇಳೆ ತಿಳಿದುಬಂದಿದ್ದು, ಹತ್ಯೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

ಲೋಕಭವನ -ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಸಂಘರ್ಷ: ಮತ ಪತ್ರ ಬಳಕೆ ಮಸೂದೆಗೆ ರಾಜ್ಯಪಾಲರ ತಡೆ

ಆನೇಕಲ್‌ ಬಳಿ ಕ್ರಿಕೆಟ್‌ ಸ್ಟೇಡಿಯಂ ನಿರ್ಮಾಣಕ್ಕೆ 943 ಕೋಟಿ ರೂ. ಟೆಂಡರ್: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪರ್ಯಾಯ ಸಮುಚ್ಚಯ !

SCROLL FOR NEXT