ಹೂವಿನಹಡಗಲಿ ತಾಲೂಕಿನ ಪ್ರಸಿದ್ಧ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ, ಗೊರವಯ್ಯ ರಾಮಣ್ಣ  
ರಾಜ್ಯ

ಸಂಪಾದಿತಲೇ ಪರಾಕ್: ಈ ಬಾರಿಯ ಮೈಲಾರ ಕಾರ್ಣಿಕ ಭವಿಷ್ಯವಾಣಿಯ ಅರ್ಥ ಏನು?

ಜನ ಕುತೂಹಲದಿಂದ ಕಾಯುತ್ತಿದ್ದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಪ್ರಸಿದ್ಧ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಸೋಮವಾರ ಹೊರ ಬಿದ್ದಿದೆ.

ವಿಜಯನಗರ: ಜನ ಕುತೂಹಲದಿಂದ ಕಾಯುತ್ತಿದ್ದ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಪ್ರಸಿದ್ಧ ಶ್ರೀಮೈಲಾರ ಲಿಂಗೇಶ್ವರ ಕಾರ್ಣಿಕ ನುಡಿ ಸೋಮವಾರ ಹೊರ ಬಿದ್ದಿದೆ.

ಇಂದು ಮೈಲಾರ ಗ್ರಾಮದ ಡೆಂಕನ ಮರಡಿಯಲ್ಲಿ ಸುಕ್ಷೇತ್ರ ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ ನಡೆದಿದ್ದು, ಗೊರವಯ್ಯ ರಾಮಣ್ಣ ಅವರು “ಸಂಪಾದಿತಲೇ ಪರಾಕ್” ಎಂದು ಈ ಬಾರಿ ಕಾರ್ಣಿಕ ನುಡಿ ನುಡಿದ್ದಾರೆ. ಈ ವರ್ಷ ರಾಜ್ಯದಲ್ಲಿ ಮಳೆ - ಬೆಳೆ ಸಮೃದ್ಧವಾಗಿರಲಿದೆ ಎಂದು ಕಾರ್ಣಿಕದ ಭವಿಷ್ಯವಾಣಿಯನ್ನು ವಿಶ್ಲೇಷಣೆ ಮಾಡಲಾಗುತ್ತಿದೆ.

ಕಾರ್ಣಿಕವನ್ನು ವರ್ಷದ ಭವಿಷ್ಯವಾಣಿ ಎಂದು ಹೇಳಲಾಗುತ್ತದೆ. ಈ ಸಲ ಭಾರಿ ಮಳೆ, ಬೆಳೆ ಚೆನ್ನಾಗಿ ಆಗಿ ರೈತರ ಬಾಳು ಹಸನಾಗುತ್ತದೆ ಎಂದು ಕಾರ್ಣಿಕ ನುಡಿ ಅರ್ಥೈಸಲಾಗಿದೆ. ಈ ಹಿನ್ನೆಲೆಯಲ್ಲಿ ಈ ಕಾರ್ಣಿಕ ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

15 ಅಡಿ ಎತ್ತರದ ಬಿಲ್ಲನೇರಿದ ಗೊರವಯ್ಯ ರಾಮಪ್ಪ ಸದ್ದಲೇ ಎಂದು ಅಲ್ಲಿ ನೆರೆದಿದ್ದ ಜನರನ್ನು ಸುಮ್ಮನಾಗಿಸಿ, ಸಂಪಾದಿತಲೇ ಪರಾಕ್‌ ಎಂದು ಕಾರ್ಣಿಕ ನುಡಿದಿದ್ದಾರೆ. ಮೈಲಾರ ಲಿಂಗೇಶ್ವರನ ಕಾರ್ಣಿಕ ಕೇಳಿ ಲಕ್ಷಾಂತರ ಭಕ್ತರು ಪುನೀತರಾಗಿದ್ದಾರೆ. ಈ ಭವಿಷ್ಯವಾಣಿ ಬಗ್ಗೆ ರಾಜ್ಯದಲ್ಲಿ ಈಗ ಭಾರೀ ಚರ್ಚೆಯಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!