ಬಿವೈ ವಿಜಯೇಂದ್ರ 
ರಾಜ್ಯ

ತಮಿಳುನಾಡಿನಲ್ಲಿ ರಾಜಕೀಯ ಮೈತ್ರಿಗೆ ಆದ್ಯತೆ ನೀಡಿದ ಪರಿಣಾಮ ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು: ಬಿವೈ ವಿಜಯೇಂದ್ರ

ಬೆಂಗಳೂರು ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿನ ನೀರಿನ ಸಮಸ್ಯೆ ಕುರಿತು ಕರ್ನಾಟಕ ಬಿಜೆಪಿ ಮುಖ್ಯಸ್ಥ ಮತ್ತು ಶಾಸಕ ಬಿವೈ ವಿಜಯೇಂದ್ರ ಸೋಮವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಬೆಂಗಳೂರು: ಬೆಂಗಳೂರು ಹಾಗೂ ರಾಜ್ಯದ ಉಳಿದ ಭಾಗಗಳಲ್ಲಿನ ನೀರಿನ ಸಮಸ್ಯೆ ಕುರಿತು ಕರ್ನಾಟಕ ಬಿಜೆಪಿ ಮುಖ್ಯಸ್ಥ ಮತ್ತು ಶಾಸಕ ಬಿವೈ ವಿಜಯೇಂದ್ರ ಸೋಮವಾರ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

'ಬೆಂಗಳೂರಿನ ನೀರಿನ ಬಿಕ್ಕಟ್ಟನ್ನು ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರಿಯಾಗಿ ನಿಭಾಯಿಸಿಲ್ಲದಿರುವುದು ಅವರ ಅಸಮರ್ಥತೆ ಮತ್ತು ಜನರ ಬಗೆಗಿನ ಅವರ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ' ಎಂದು ಅವರು ಹೇಳಿದರು.

'ತಾವೇ ಸೃಷ್ಟಿಸಿರುವ ಬಿಕ್ಕಟ್ಟಿನ ವಾಸ್ತವವನ್ನು ಅರಿತುಕೊಂಡು ಬೆಂಗಳೂರಿನ ನಾಗರಿಕರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ನಾನು ಸಿಎಂ ಮತ್ತು ಸರ್ಕಾರವನ್ನು ಒತ್ತಾಯಿಸುತ್ತೇನೆ. ಜೀವಗಳು ಅಪಾಯದಲ್ಲಿದೆ ಮತ್ತು ಅವರ ನಿರ್ಲಕ್ಷ್ಯವನ್ನು ಇನ್ನು ಮುಂದೆ ಸಹಿಸಲಾಗುವುದಿಲ್ಲ' ಎಂದು ಹೇಳಿದರು.

'ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಮೈತ್ರಿಗಳಿಗೆ ಆದ್ಯತೆ ನೀಡುವ ಮೂಲಕ ಕರ್ನಾಟಕದ ನಾಗರಿಕರನ್ನು ಅಸಹನೀಯ ದುಃಖಕ್ಕೆ ದೂಡಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿ ಮುಂದೆ ಮೊದಲು ನಮ್ಮ ಹಿತಾಸಕ್ತಿಗಳನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸುವಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ವೈಫಲ್ಯವಾಗಿದ್ದು, ಈಗಾಗಲೇ ಪರಿಸ್ಥಿತಿಯನ್ನು ಉಲ್ಬಣಗೊಳಿಸಿದೆ. ಇದುವೇ ಬೆಂಗಳೂರಿನಲ್ಲಿ ಭಾರಿ ನೀರಿನ ಕೊರತೆಗೆ ಕಾರಣವಾಯಿತು' ಎಂದರು.

ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಮಳೆಗಾಲಕ್ಕೆ ನಾಲ್ಕು ತಿಂಗಳು ಬಾಕಿ ಇದ್ದು, ನೀರಿನ ಸಂಗ್ರಹವು ಆತಂಕಕಾರಿಯಾಗಿ ಕುಸಿದಿರುವುದರಿಂದ ಕುಡಿಯುವ ನೀರಿನ ಲಭ್ಯತೆಯ ಬಗ್ಗೆ ರಾಜ್ಯದಲ್ಲಿನ ಕಠಿಣ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳು ಚಿಂತಿತರಾಗಿದ್ದಾರೆ. ಈ ವಿಷಯವನ್ನು ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ನಾಯಕರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Indian Stock Market: ರಕ್ತಪಾತ.. ಒಂದೇ ಗಂಟೆಯಲ್ಲಿ ಹೂಡಿಕೆದಾರರಿಗೆ 7,60,00,00,00,000 ನಷ್ಟ!

North Korea Election: ಇತಿಹಾಸದಲ್ಲೇ ಮೊದಲು, Kim Jong Un ವಿರುದ್ಧ ಮತ ಚಲಾವಣೆ, ಆದರೂ ಶೇ. 99.99% ಮತದಾನ.. ಸರ್ವಾಧಿಕಾರಿಗೆ ಭರ್ಜರಿ ಜಯ

ಯುಗಾದಿ ಹಬ್ಬದ ದಿನವೇ ದೇವತೆ ಆಗಮನ: ದಿನೇಶ್ ಕಾರ್ತಿಕ್-ದೀಪಿಕಾ ಪಳ್ಳಿಕಲ್ 3ನೇ ಮಗು ಜನನ!

'ರಹಸ್ಯ ಕ್ಯಾಮೆರಾಗಳು, 58 ಮಹಿಳೆಯರ ಅಶ್ಲೀಲ ವಿಡಿಯೋ, 3 ವರ್ಷ ನಿರಂತರ ಅತ್ಯಾಚಾರ': ನಾಸಿಕ್ ಸೆಲೆಬ್ರೆಟಿ ಜ್ಯೋತಿಷಿ ಬಂಧನ!

ಯುದ್ಧ ನಮ್ಮದಲ್ಲ: ಶಶಿತರೂರ್ ಬಳಿಕ ಮೋದಿ ಸರ್ಕಾರವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಮನೀಶ್ ತಿವಾರಿ

SCROLL FOR NEXT