ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ 
ರಾಜ್ಯ

ರಾಜ್ಯಸಭಾ ಚುನಾವಣೆ: ಅಡ್ಡಮತ ಚಲಾಯಿಸಿದ ಎಸ್.ಟಿ. ಸೋಮಶೇಖರ್; ಬಿಜೆಪಿಗೆ ಶಾಕ್!

ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ಬೆಂಗಳೂರು: ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಹಾಗೂ ಆಗಾಗ ಕಾಂಗ್ರೆಸ್‌ ನಾಯಕರ ಜೊತೆ ಕಾಣಿಸಿಕೊಳ್ಳುತ್ತಿರುವ ಯಶವಂತಪುರ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರು ಅಡ್ಡ ಮತದಾನ ಮೂಲಕ ಮೂಲಕ ಬಿಜೆಪಿ ಹಾಗೂ ಜೆಡಿಎಸ್‌ ಬಿಗ್‌ ಶಾಕ್‌ ನೀಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ್‌ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆಂದು ತಿಳಿದುಬಂದಿದೆ.

ಇನ್ನೂ ಎಸ್‌ ಟಿ ಸೋಮಶೇಖರ್‌ ಅವರು ಕಾಂಗ್ರೆಸ್‌ ಗೆ ಅಡ್ಡ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ.

ಮತದಾನಕ್ಕೂ ಮೊದಲು ಮಾಧ್ಯಮಗಳ ಜೊತೆ ಮಾತನಾಡಿದ್ದ ಸೋಮಶೇಖರ್ ಅವರು, "11 ವರ್ಷದಿಂದ ಎಲ್ಲರಿಗೂ ಮತ ಹಾಕಿದ್ದೇನೆ. ಆದರೆ, ರಾಜ್ಯಸಭೆಗೆ ಆಯ್ಕೆ ಆದವರು ಒಂದು ರೂಪಾಯಿ ಅನುದಾನವನ್ನೂ ಕೊಟ್ಟಿಲ್ಲ. ನೇರ ನೇರ ಹೇಳುತ್ತೇನೆ, ನಾನು ಈ ಬಾರಿ ಆತ್ಮಸಾಕ್ಷಿಯಂತೆ ಮತ ಹಾಕುತ್ತೇನೆ.‌ ಕಳೆದ ಬಾರಿ (ಹಾಲಿ ಹಣಕಾಸು ಸಚಿವೆ) ನಿರ್ಮಲಾ ಸೀತಾರಾಮನ್ ಅವರಿಗೆ ಮತ ಹಾಕಿದ್ದೆ. ಆಮೇಲೆ ನಿರ್ಮಲಾ ಸೀತಾರಾಮನ್ ನನಗೆ ಭೇಟಿಗೆ ಅಪಾಯಿಟ್ಮೆಂಟ್ ಕೂಡ ಕೊಡಲೇ ಇಲ್ಲ," ಎಂದು ಬೇಸರ ಹೊರಹಾಕಿದ್ದರು.

ನನಗೆ ಯಾರು ಭರವಸೆ ಕೊಡುತ್ತಾರೋ ಅವರಿಗೆ ನಾನು ನನ್ನ ಮತ ಹಾಕುತ್ತೇನೆ. ನೆಪ ಹೇಳುತ್ತಿಲ್ಲ. ಹೇಳಿದ ಹಾಗೆ ಮತ ಚಲಾಯಿಸಿದ್ದೇನೆ. ಓಟು ಹಾಕಿಸಿಕೊಳ್ಳುವ ಮೊದಲು ಭರವಸೆ ನೀಡುತ್ತಾರೆ. 5 ಕೋಟಿ ರೂ. ಅನುದಾನ ಬರುತ್ತದೆ. ಆದರೆ, ಅದನ್ನು ನಮಗೆ ಕೊಡುತ್ತಾರಾ? ಆತ್ಮಸಾಕ್ಷಿಯಾಗಿ ಅಲ್ಲಿ (ವಿಧಾನಸೌಧಕ್ಕೆ) ಹೋಗಿ ಮತ ಚಲಾಯಿಸುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರ ಅಭಿವೃದ್ಧಿ ಆಗಿಲ್ಲ ಅಂತ ಹೇಳಿಲ್ಲ. ಪಕ್ಷ ಏನು ಹೇಳುತ್ತದೋ ಅದನ್ನು ಮಾಡಿದ್ದೆ ಎಂದ ಅವರು,‌ ಜೆಡಿಎಸ್‌ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಏನು ಸಾಚಾನಾ? ಅವರು ಅವಕಾಶವಾದಿ ಅಲ್ವಾ? ಇವರನ್ನು ಮುಖ್ಯಮಂತ್ರಿ ಮಾಡಿರಲಿಲ್ವಾ? ಸಿಎಂ ಆದ್ಮೇಲೆ ಒಂದು, ಆಮೇಲೆ ಒಂದಾ? ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದರು.

ಇದರ ನಡುವೆ ಮತದಾನ ಮಾಡಿದ ಬಳಿಕ ಮಾತನಾಡಿರುವ ಎಸ್‌ಟಿ ಸೋಮಶೇಖರ್, "ಆತ್ಮಸಾಕ್ಷಿಗೆ ಅನುಗುಣವಾಗಿ ಮತದಾನ ಮಾಡಿದ್ದೇನೆ. ನಾನು ಮತದಾನ ಮಾಡಿದ್ದನ್ನು ಏಜೆಂಟ್‌ಗೆ ತೋರಿಸಿದ್ದೇನೆ," ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT