ಸಾಂದರ್ಭಿಕ ಚಿತ್ರ  
ರಾಜ್ಯ

ನಕಲಿ ಆಸ್ತಿ ದಾಖಲೆ ಬಳಸಿ 15 ಬ್ಯಾಂಕ್‌ಗಳಿಗೆ ಕೋಟ್ಯಂತರ ರೂ. ಹಣ ವಂಚಿಸಿದ ಆರೋಪ: ದಂಪತಿ ವಿರುದ್ಧ ಎಂಟು FIR ದಾಖಲು

ಒಂದೇ ಆಸ್ತಿಯ ದಾಖಲೆ ಪತ್ರಗಳನ್ನು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಅಡಮಾನವಿಟ್ಟು ನಗರದ ದಂಪತಿಯೊಬ್ಬರು ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ.

ಬೆಂಗಳೂರು: ಒಂದೇ ಆಸ್ತಿಯ ದಾಖಲೆ ಪತ್ರಗಳನ್ನು ವಿವಿಧ ಹಣಕಾಸು ಸಂಸ್ಥೆಗಳಲ್ಲಿ ಅಡಮಾನವಿಟ್ಟು ನಗರದ ದಂಪತಿಯೊಬ್ಬರು ಕೋಟ್ಯಂತರ ರೂಪಾಯಿ ವಂಚಿಸಿರುವ ಪ್ರಕರಣ ನಡೆದಿದೆ. ಬೆಂಗಳೂರು ನಗರದಲ್ಲಿ ಇಲ್ಲದೇ ಇರುವ ಆಸ್ತಿಯ ಬಗ್ಗೆ ಕೃತ್ರಿಮ ದಾಖಲೆಗಳನ್ನು ಸೃಷ್ಟಿ ಮಾಡಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬ್ಯಾಂಕ್ ಅಧಿಕಾರಿಗಳು ದಂಪತಿ ನೀಡಿದ್ದ ದಾಖಲೆ ಪತ್ರದಲ್ಲಿ ನಮೂದಿಸಿದ್ದಂತೆ ಬೆಂಗಳೂರು ದಕ್ಷಿಣ ತಾಲೂಕಿನ ಬೇಗೂರಿನಲ್ಲಿ ಆಸ್ತಿಯನ್ನು ಜಪ್ತಿ ಮಾಡಲು ಹೋದಾಗ, ಈಗಾಗಲೇ ಅನೇಕ ಹಣಕಾಸು ಸಂಸ್ಥೆಗಳಿಗೆ ನಿವೇಶನವನ್ನು ಒತ್ತೆ ಇಟ್ಟು ವಂಚಿಸಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳು ಬೇಗೂರು ಸಬ್ ರಿಜಿಸ್ಟ್ರಾರ್ ಕಚೇರಿ, ಬಿಬಿಎಂಪಿ ಮತ್ತು ಬಿಡಿಎಗಳಲ್ಲಿ ದಾಖಲೆಗಳನ್ನು ಪರಿಶೀಲಿಸಿದಾಗಲೇ ಬೇಗೂರಿನಲ್ಲಿ ವಿವಿಧ ಸಂಖ್ಯೆಗಳಲ್ಲಿ ತೋರಿಸಿರುವ ಜಮೀನು/ಸೈಟ್‌ಗಳ ದಾಖಲೆಗಳು ನಕಲಿ ಎಂದು ತಿಳಿದುಬಂದಿದೆ.

ಇದೀಗ ವಂಚನೆ ಮಾಡಿರುವ ಕೆ ಎಸ್ ನಾಗೇಶ್ ಮತ್ತು ಸುಮಾ ಬಿ ಎಸ್ ದಂಪತಿಯಿಂದ ಸಾಲ ಮತ್ತು ಬಡ್ಡಿಯ ಮೊತ್ತವನ್ನು ವಸೂಲಿ ಮಾಡಿಕೊಳ್ಳಲು 15 ಕ್ಕೂ ಹೆಚ್ಚು ಬ್ಯಾಂಕ್‌ಗಳು ಮತ್ತು ಹಣಕಾಸು ಸಂಸ್ಥೆಗಳು ಸರದಿ ಸಾಲಿನಲ್ಲಿ ನಿಂತಿವೆ. ಈ ದಂಪತಿ ತಮ್ಮ ಕಂಪೆನಿಗಳಾದ ಶ್ರೀನಿಧಿ ಮ್ಯಾನುಫ್ಯಾಕ್ಚುರರ್ಸ್ ಅಂಡ್ ಶ್ರೀನಿಧಿ ಮಸಾಲಾ ಹೆಸರಿನಲ್ಲಿ ಯಂತ್ರೋಪಕರಣಗಳ ಖರೀದಿಗೆ ಸಾಲ ಪಡೆದಿದ್ದರು.

ಕೆಲವು ನಿದರ್ಶನಗಳನ್ನು ಉಲ್ಲೇಖಿಸುವುದಾದರೆ, ಅವರು 2018 ರಲ್ಲಿ ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋಆಪರೇಟಿವ್‌ಗೆ 1.30 ಕೋಟಿ ರೂಪಾಯಿ, ತುಮಕೂರು ಧಾನ್ಯ ವ್ಯಾಪಾರಿಗಳ ಸಹಕಾರಿ ಬ್ಯಾಂಕ್‌ಗೆ ಡಿಸೆಂಬರ್ 2022ರಲ್ಲಿ 2.09 ಕೋಟಿ ರೂಪಾಯಿ, ಕೋಟೇಶ್ವರ ಸಹಕಾರಿ ಬ್ಯಾಂಕ್‌ಗೆ 2022 ರಿಂದ 1.88 ಕೋಟಿ ರೂಪಾಯಿ, ತುಮಕೂರು ವೀರಶೈವ ಸಹಕಾರಿ ಬ್ಯಾಂಕ್ ಗೆ 1 ಕೋಟಿ ರೂಪಾಯಿ ಮತ್ತು 2018 ರಲ್ಲಿ ಸಿಂಡಿಕೇಟ್ ಬ್ಯಾಂಕ್‌ನಿಂದ 95 ಲಕ್ಷ ರೂಪಾಯಿ ಸಾಲ ಪಡೆದಿದ್ದರು.

ಬೆಂಗಳೂರಿನಲ್ಲಿ ದಂಪತಿ ವಿರುದ್ಧ 8 ಎಫ್‌ಐಆರ್‌ ದಾಖಲು: ಪಡೆದುಕೊಂಡ ಎಲ್ಲಾ ಸಾಲಗಳಿಗೆ, ಪತಿಯು ಅರ್ಜಿದಾರರಾಗಿದ್ದರೆ ಪತ್ನಿಯು ಇತರರೊಂದಿಗೆ ಜಾಮೀನುದಾರರಾಗಿರುತ್ತಾರೆ, ಇನ್ನು ಕೆಲವಕ್ಕೆ ಪತ್ನಿ ಅರ್ಜಿದಾರರಾಗಿದ್ದು ಪತಿ ಜಾಮೀನುದಾರರಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ದಂಪತಿಗಳು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಮುಂದೆ ಜಯನಗರ ಪೊಲೀಸರು ಸಲ್ಲಿಸಿದ ವರದಿಯ ಪ್ರಕಾರ, ದಂಪತಿ ವಿರುದ್ಧ ಎಂಟು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ - ಜಯನಗರ ಪೊಲೀಸ್ ಠಾಣೆಯಲ್ಲಿ ಎರಡು, ಪುಟ್ಟೇನಹಳ್ಳಿ ಮತ್ತು ಶೇಷಾದ್ರಿಪುರಂ ಠಾಣೆಗಳಲ್ಲಿ ತಲಾ ಒಂದು ಮತ್ತು ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ನಾಲ್ಕು -- 2018 ಮತ್ತು 2022 ರ ನಡುವೆ ದಾಖಲಾಗಿವೆ.

ಬನಶಂಕರಿ ಸಹಕಾರಿ ಬ್ಯಾಂಕ್, ಬಿಡಿಸಿಸಿ ಬ್ಯಾಂಕ್, ಟಾಟಾ ಕ್ಯಾಪಿಟಲ್, ಕಾರ್ಪೊರೇಷನ್ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್, ಲಕ್ಷ್ಮೀ ವಿಲಾಸ್ ಬ್ಯಾಂಕ್, ತುಮಕೂರು ಧಾನ್ಯ ವ್ಯಾಪಾರಿಗಳ ಸಹಕಾರಿ ಬ್ಯಾಂಕ್, ಬನಶಂಕರಿ ಮಹಿಳಾ ಸಹಕಾರಿ ಬ್ಯಾಂಕ್, ತುಮಕೂರು ಮರ್ಚೆಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್, ಕೋಟೇಶ್ವರ ಸಹಕಾರಿ ಬ್ಯಾಂಕ್, ನ್ಯಾಷನಲ್. ಸಹಕಾರಿ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಮಣಪ್ಪುರಂ ಫೈನಾನ್ಸ್ ಮತ್ತು ಮಹಿಳಾ ಸಹಕಾರಿ ಬ್ಯಾಂಕ್, ಕೆನರಾ ಬ್ಯಾಂಕ್ ಮತ್ತು ಅಲಹಾಬಾದ್ ಬ್ಯಾಂಕ್ ದಂಪತಿಯಿಂದ ವಂಚನೆಗೊಳಗಾಗಿವೆ.

ದಂಪತಿ ಹೇಳುವುದೇನು?: ನಮ್ಮನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಿ ಹಾಕಲಾಗಿದೆ. ನಾವು ಯಾವುದೇ ವಹಿವಾಟುಗಳಿಗೆ ಯಾವುದೇ ರೀತಿಯಲ್ಲಿ ಸಂಪರ್ಕ ಹೊಂದಿಲ್ಲ ಎನ್ನುತ್ತಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ದಂಪತಿಗೆ ಜಾಮೀನು ನೀಡಲು ನಿರಾಕರಿಸುತ್ತಿದ್ದು, ದಂಪತಿ ಅಕ್ರಮ ವ್ಯವಹಾರದಲ್ಲಿ ಭಾಗಿಯಾಗಿರುವ ಬಗ್ಗೆ ಸಾಕ್ಷ್ಯಾಧಾರಗಳು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆಪಾದಿತ ಅಪರಾಧಗಳಲ್ಲಿ ಅವರು ಭಾಗಿಯಾಗಿರುವುದನ್ನು ಮೇಲ್ನೋಟಕ್ಕೆ ತೋರಿಸುತ್ತದೆ ಎನ್ನುತ್ತಾರೆ.

ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ಮೂರನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ನಿಶಾರಾಣಿ ಎಸಿ, ಆರೋಪಿ ದಂಪತಿ ಎಂಟು ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ ಎಂದು ಬಹಿರಂಗಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT