ಎಚ್.ಎಂ. ರೇವಣ್ಣ 
ರಾಜ್ಯ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರೇವಣ್ಣ ನೇಮಕ; 44 ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿಗೂ ಸಿಎಂ ಅಸ್ತು

ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚನೆ.

ಬೆಂಗಳೂರು: ಐದು ಗ್ಯಾರಂಟಿಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಒತ್ತು ನೀಡುತ್ತಿದೆ. ಇದೀಗ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಮಿತಿ ರಚಿಸಿದ್ದು, ಸಮಿತಿಗೆ ಮಾಜಿ ಸಚಿವ ಎಚ್​.ಎಂ.ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅನುಮೋದನೆ ನೀಡಿದ್ದು, ಸಚಿವ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ರೇವಣ್ಣ ಅವರನ್ನು ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಉಪಾಧ್ಯಕ್ಷರಾಗಿ ಮೆಹರೋಜ್ ಖಾನ್, ಡಾ.ಪುಷ್ಪಾ ಅಮರನಾಥ್​, ಎಸ್.ಆರ್.ಪಾಟೀಲ್, ಸೂರಜ್ ಹೆಗ್ಡೆ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದೇ ವೇಳೆ, 44 ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದ್ದು, ನಾಳೆ(ಫೆ.29) ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಸಿಎಂ ಕಚೇರಿ ಮಾಹಿತಿ ನೀಡಿದೆ.

ಕೆಲವು ದಿನಗಳ ಹಿಂದೆ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರುಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚನೆ ಬಗ್ಗೆ ಘೋಷಣೆ ಮಾಡಿದ್ದರು.

ವಾರ್ಷಿಕ 16 ಕೋಟಿ ರೂ. ವೆಚ್ಚ

ಈ ಅನುಷ್ಠಾನ ಸಮಿತಿ ನಿರ್ವಹಣೆಗೆ ವಾರ್ಷಿಕವಾಗಿ 16 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ