ಸಭಾಪತಿ ಬಸವರಾಜ ಹೊರಟ್ಟಿ(ಸಂಗ್ರಹ ಚಿತ್ರ)
ಸಭಾಪತಿ ಬಸವರಾಜ ಹೊರಟ್ಟಿ(ಸಂಗ್ರಹ ಚಿತ್ರ) 
ರಾಜ್ಯ

ಪಾಕಿಸ್ತಾನ ಜಿಂದಾಬಾದ್ ಘೋಷಣೆ ಪ್ರಕರಣ: ಸಭಾಪತಿಗಳ ಮುಂದೆ ಕೈ ಕೈ ಮಿಲಾಯಿಸಲು ಮುಂದಾದ ಸದಸ್ಯರು

Sumana Upadhyaya

ಬೆಂಗಳೂರು: ನೂತನ ರಾಜ್ಯಸಭಾ ಸದಸ್ಯ ಡಾ ಸೈಯದ್ ನಾಸಿರ್ ಹುಸೇನ್ ಅಭಿಮಾನಿಗಳು ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ ಎಂಬ ಆರೋಪ ಇಂದು ಬುಧವಾರ ವಿಧಾನ ಮಂಡಲದ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ನಡುವೆ ತೀವ್ರ ಗದ್ದಲ-ಕೋಲಾಹಲಕ್ಕೆ ಕಾರಣವಾಯಿತು.

ಇಂದು ವಿಧಾನಪರಿಷತ್ತಿನಲ್ಲಿ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ವಿಷಯ ಪ್ರಸ್ತಾಪಿಸಿದರು. ಪಾಕಿಸ್ತಾನ ಪರ ಘೋಷಣೆ ಹಾಕಿರುವ ವಿಚಾರವನ್ನು ಪರಿಷತ್​ ಸದಸ್ಯ ಎನ್​ ರವಿಕುಮಾರ್​​ ಪ್ರಸ್ತಾಪಿಸಿ ಇದು “ದೇಶದ್ರೋಹಿ ಸರ್ಕಾರ” ಎಂದರು.

ಪದ ಬಳಕೆಯಿಂದ ಕೆರಳಿದ ಕಾಂಗ್ರೆಸ್​​​ ಸದಸ್ಯ ಅಬ್ದುಲ್ ಜಬ್ಬಾರ್ “ಅವನ ಬಾಯಿ ಬಂದ್ ಮಾಡಿ” ಎಂದು ರವಿಕುಮಾರ್​ ಅವರ ಮೇಲೆ ಏಕವಚನ ಪ್ರಯೋಗ ಮಾಡಿದರು. ಇದರಿಂದ ವಿಧಾನಪರಿಷತ್‌ನಲ್ಲಿ ಗದ್ದಲ ಜೋರಾಯಿತು. ಅಬ್ದುಲ್ ಜಬ್ಬಾರ್ ಮಾತಿಗೆ ರೊಚ್ಚಿಗೆದ್ದ ಬಿಜೆಪಿ ಸದಸ್ಯರು ಏಕವಚನದಲ್ಲಿ ಮಾತಾಡಿದರೆ ಸರಿ ಇರಲ್ಲವೆಂದರು. ಬಳಿಕ ರವಿಕುಮಾರ್ ಎದ್ದು ಅಬ್ದುಲ್​ ಜಬ್ಬರ್​ ಬಳಿ ಹೋದರು. ರವಿಕುಮಾರ್ ಜೊತೆ ತುಳಸಿ ಮುನಿರಾಜುಗೌಡ ಮುನ್ನುಗ್ಗಿ ಹೋದರು. ಎರಡೂ ಕಡೆಯ ಸದಸ್ಯರು ಸಭಾಪತಿಗಳ ಮುಂದೆಯೇ ಕೈಕೈ ಮಿಲಾಯಿಸಲು ಮುಂದಾದರು.

ಪರಿಸ್ಥಿತಿ ನಿಯಂತ್ರಿಸಿದ ಮಾರ್ಷಲ್ ಗಳು: ಈ ವೇಳೆ ಪರಿಸ್ಥಿತಿಯನ್ನು ನಿಯಂತ್ರಿಸಲು ಮಾರ್ಷಲ್‌ಗಳು ಹರಸಾಹಸಪಟ್ಟರು. ಮಧ್ಯ ಪ್ರವೇಶಿಸಿದ ಸಚಿವ ಹೆಚ್‌.ಕೆ.ಪಾಟೀಲ್‌ ಎರಡೂ ಕಡೆಯವರನ್ನು ಸಮಾಧಾನಪಡಿಸಿ ಕ್ಷಮೆ ಕೇಳುವಂತೆ ಸಲಹೆ ನೀಡರು. ಇದಕ್ಕೆ ಎನ್​. ರವಿಕುಮಾರ್​ ದೇಶದ ಪರವಾಗಿ ಮಾತನಾಡಿದ್ದೇನೆ, ಅದು ಕ್ಷಮೆ ಕೇಳುವ ವಿಷಯವಾ ಎಂದರು. ಇತ್ತ ಅಬ್ದುಲ್ ಜಬ್ಬಾರ್ ನಿಮ್ಮ ಮೂಲಕ ನಾನು ಆಡಿದ ಮಾತು ವಾಪಸ್ ಪಡೆಯುತ್ತೇನೆ ಎಂದು ಹೇಳಿದಾಗ ಪರಿಸ್ಥಿತಿ ತಿಳಿಯಾಯಿತು.

SCROLL FOR NEXT