ಎನ್.ಎಸ್.ಭೋಸರಾಜು 
ರಾಜ್ಯ

ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆಗೆ ರಾಜ್ಯ ಸರ್ಕಾರ ಚಿಂತನೆ, ಬಿಜೆಪಿ ಕೆರಳುವುದು ಖಚಿತ!

ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ.

ಬೆಂಗಳೂರು: ವಿದ್ಯಾರ್ಥಿಗಳಿಗೆ ನೂತನ ಕೌಶಲ್ಯಗಳನ್ನು ಕಲಿಸುವ ಉದ್ದೇಶದಿಂದ ಹಾಗೂ ಸಂಶೋಧನೆ, ಪ್ರಾಯೋಗಿಕ ಕಲಿಕೆಗೆ ಪ್ರೇರೇಪಣೆ ನೀಡುವ ನಿಟ್ಟಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ನೆಹರು ಸ್ಟ್ರೀಮ್ ಲ್ಯಾಬ್ ಸ್ಥಾಪನೆ ಕುರಿತು ಚಿಂತನೆ ನಡೆಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಬುಧವಾರ ಹೇಳಿದ್ದಾರೆ.

ಜವಹರಲಾಲ್ ನೆಹರು ತಾರಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಯುವ ಮನಸ್ಸುಗಳಲ್ಲಿ ಕುತೂಹಲ, ಸೃಜನಶೀಲತೆ ಹಾಗೂ ಕಲ್ಪನೆ ಬೆಳೆಸುವುದು ಈ ಲ್ಯಾಬ್ ನ ಉದ್ದೇಶ. ವಿದ್ಯಾರ್ಥಿಗಳ ಕಲಿಕೆ ಇನ್ನಷ್ಟು ಪರಿಣಾಮಕಾರಿಯಾಗಿರಲು ಮತ್ತೆ ಸಮಸ್ಯೆಗಳ ಪರಿಹಾರಕ್ಕೆ ಪ್ರಾಯೋಗಿಕವಾಗಿ ಚರ್ಚಿಸಲು, ಸಂಶೋಧಿಸಲು ಹಾಗೂ ಪರಿಹಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇದು ಪ್ರೇರೇಪಿಸಲಿದೆ. 21ನೇ ಶತಮಾನದ ಕೌಶಲ್ಯಗಳ ಕಲಿಕೆಗೆ ಅನುವು ಮಾಡಿಕೊಡುವ ಪಠ್ಯಕ್ರಮವನ್ನು ಇದರಲ್ಲಿ ಅಳವಡಿಸುವ ಉದ್ದೇಶ ಹೊಂದಿದ್ದೇವೆ ಎಂದು ತಿಳಿಸಿದರು.

ನೆಹರು ಸ್ಟ್ರೀಮ್ ಲ್ಯಾಬ್ಸ್ ಪ್ರಾಯೋಗಿಕ ಅನುಭವವನ್ನು ಮತ್ತು ವಿವಿಧ ಕೌಶಲ್ಯಗಳಲ್ಲಿ ಪ್ರಾವೀಣ್ಯತೆ ಪಡೆಯಲು ವಿದ್ಯಾರ್ಥಿಗಳಿಗೆ ಅವಕಾಶ ನೀಡುತ್ತದೆ. ವಿಜ್ಞಾನ, ತಂತ್ರಜ್ಞಾನ, ರೊಬೊಟಿಕ್ಸ್, ಪರಿಸರ ಮತ್ತು ಪರಿಸರ ವಿಜ್ಞಾನ, ಖಗೋಳಶಾಸ್ತ್ರ ಮತ್ತು ಗಣಿತ ವಿಷಯಗಳ ಅಂತರಶಿಸ್ತೀಯ ಸ್ವರೂಪವನ್ನು ಅರ್ಥಮಾಡಿಕೊಳ್ಳಲು ಉಪಕರಣಗಳು ಮತ್ತು ಸಲಕರಣೆಗಳೊಂದಿಗೆ ಕೆಲಸ ಮಾಡಲು ವಿದ್ಯಾರ್ಥಿಗಳಿಗೆ ಅನುವು ಮಾಡಿಕೊಡುವ ಉದ್ದೇಶ ಹೊಂದಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT