ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಕನ್ನಡ ನಾಮಫಲಕ ಅಳವಡಿಕೆ ಗಡುವು ಎರಡು ವಾರ ವಿಸ್ತರಿಸಿದ ರಾಜ್ಯ ಸರ್ಕಾರ

Lingaraj Badiger

ಬೆಂಗಳೂರು: ಬೆಂಗಳೂರಿನಲ್ಲಿ ಹೋಟೆಲ್, ಅಂಗಡಿ ಸೇರಿದಂತೆ ಎಲ್ಲಾ ವ್ಯಾಪಾರಿ ಕೇಂದ್ರಗಳ ನಾಮಫಲಕದಲ್ಲಿ ಶೇ. 60ರಷ್ಟು ಕನ್ನಡ ಇರಬೇಕು ಎಂದು ಕಡ್ಡಾಯಗೊಳಿಸಲಾಗಿದ್ದು, ನಿಯಮಬದ್ಧ ಫಲಕ ಅಳವಡಿಸಲು ನಿಗದಿಪಡಿಸಲಾಗಿದ್ದ ಗಡುವನ್ನು ರಾಜ್ಯ ಸರ್ಕಾರ ಗುರುವಾರ ಎರಡು ವಾರಗಳವರೆಗೆ ವಿಸ್ತರಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಸಿಎಂ ಟ್ವೀಟ್ ಮಾಡಿದ್ದಾರೆ.

ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಅಳವಡಿಕೆಗೆ ನೀಡಲಾಗಿದ್ದ ಗಡುವು ಇಂದು ಅಂತ್ಯವಾಗಿದ್ದು, ಅದನ್ನು ಈಗ ವಾರಗಳ ಕಾಲ ವಿಸ್ತರಿಸಲಾಗಿದೆ. ಎರಡು ವಾರಗಳ ನಂತರ ಆದೇಶ ಪಾಲನೆ ಮಾಡದ ಮಳಿಗೆಗಳ ವ್ಯಾಪಾರ ಪರವಾನಗಿ ರದ್ದುಪಡಿಸಿ, ದಂಡ ವಿಧಿಸಲು ಬಿಬಿಎಂಪಿ ಮುಂದಾಗಿದೆ.

SCROLL FOR NEXT