ರಾಜ್ಯ

ಚಿಕ್ಕಮಗಳೂರು: ವಿಚಾರಣಾಧೀನ ಕೈದಿ ಅನುಮಾನಾಸ್ಪದ ಸಾವು, ಪೊಲೀಸರ ವಿರುದ್ಧ ಕುಟುಂಬಸ್ಥರ ಆಕ್ರೋಶ!

ವಿಚಾರಣಾಧೀನ ಕೈದಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಚಿಕ್ಕಮಗಳೂರು: ವಿಚಾರಣಾಧೀನ ಕೈದಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ದಾಯಾದಿಗಳ ಹೊಡೆದಾಟ ಪ್ರಕರಣದಲ್ಲಿ 7 ವರ್ಷಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿಬಿದ್ದ ಮೂರೇ ದಿನಗಳಲ್ಲಿ ಸಾವನ್ನಪ್ಪಿದ್ದು, ಮೃತನ ಕುಟುಂಬಸ್ಥರು ಇದೀಗ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸತೀಶ್ ಎಂಬಾತ ಕಳೆದ 7 ವರ್ಷಗಳ ಹಿಂದೆ ತನ್ನ ಅಣ್ಣನಾದ ಸಿದ್ದರಾಜು ಎಂಬಾತನ ಹೋಟೆಲ್ ನಲ್ಲಿ ಕೆಲಸ ಮಾಡುವ ವೇಳೆ ಚಿಕ್ಕಮಗಳೂರಿನ ದಂಟರಮಕ್ಕಿ ಬಳಿ ಹೊಡೆದಾಟ ಮಾಡಿಕೊಂಡಿದ್ದಾರೆ. ನಂತರ ತಲೆ ಮರೆಸಿಕೊಂಡು ಹಾಸನದ ಶ್ರೀನಗರದಲ್ಲಿ ವಾಸವಿದ್ದ ಕಳೆದ ನಾಲ್ಕು ದಿನಗಳ ಹಿಂದೆ ನಗರ ಠಾಣೆ ಪೊಲೀಸರು ಈತನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ಅನಾರೋಗ್ಯದಿಂದ ಬಳಲುತ್ತಿದ್ದ ಸತೀಶ್ ಅವರನ್ನು ಸ್ಥಳೀಯ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ, ಬುಧವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಇದೀಗ ಸತೀಶ್ ಸಾವಿನ ಬಗ್ಗೆ ಆತನ ಪತ್ನಿ ನೇತ್ರಾ ಅನುಮಾನ ವ್ಯಕ್ತಪಡಿಸಿದ್ದಾರೆ.

ಜಾಮೀನು ರಹಿತ ವಾರೆಂಟ್ ನಡಿ ಬಂಧಿಸಿ ನಾಲ್ಕು ದಿನಗಳ ನಂತರ ಹೊಡೆದು ಆಸ್ಪತ್ರೆಗೆ ಸೇರಿಸಿ ಇಂದು ನಮಗೆ ವಿಷಯ ತಿಳಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಸತೀಶ್ ಕೈ ಕುತ್ತಿಗೆ ಹಾಗೂ ದೇಹದ ಭಾಗದಲ್ಲಿ ಗಾಯಗಳಾಗಿದ್ದು ಕಾರಾಗೃಹ ಹಾಗೂ ಪೊಲೀಸ್ ಸಿಬ್ಬಂದಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರಬಹುದು ಎಂದು ಸತೀಶ್ ಸಹೋದರ ಅನುಮಾನ ವ್ಯಕ್ತಪಡಿಸಿದ್ದಾರೆ.

ವಿಚಾರಣಾಧೀನ ಹಂತದಲ್ಲಿ ಮೃತಪಟ್ಟ ಕಾರಣ ನ್ಯಾಯಾಧೀಶರು ಜಿಲ್ಲಾಸ್ಪತ್ರೆಗೆ ಆಗಮಿಸಿ ಮೃತನ ಕುಟುಂಬಸ್ಥರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

SCROLL FOR NEXT