ಕೆ. ಶಿವರಾಮ್  
ರಾಜ್ಯ

'ಬಾ ನಲ್ಲೆ ಮಧುಚಂದ್ರಕೆ' ಸಿನಿಮಾ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಮ್ ವಿಧಿವಶ

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ಬೆಂಗಳೂರು: ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯಾಗಿದ್ದ, ಬಿಜೆಪಿ ಮುಖಂಡ, ನಟ ಕೆ ಶಿವರಾಮ್ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ.

ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ, ಗುರುವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮೋದಿ ರಸ್ತೆಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯಲ್ಲಿ 1953ರಲ್ಲಿ ಜನಿಸಿದ್ದ ಶಿವರಾಮು, 1985ರಲ್ಲಿ ಕೆಎಎಸ್‌ ಅಧಿಕಾರಿಯಾಗಿ ಆಯ್ಕೆಯಾಗಿದ್ದರು. ಬಳಿಕ, ಕನ್ನಡದಲ್ಲಿಯೇ ಐಎಎಸ್‌ ಪರೀಕ್ಷೆ ಬರೆದು, ಐಎಎಸ್‌ ಅಧಿಕಾರಿಯೂ ಆಗಿದ್ದರು. ಆ ಮೂಲಕ, ಕನ್ನಡದಲ್ಲಿ ಐಎಎಸ್‌ ಬರೆದು, ಅಧಿಕಾರಿಯಾದ ಮೊದಲ ಕನ್ನಡಿಗ ಎಂಬ ಹೆಗ್ಗಳಿಕೆಗೂ ಭಾಜನರಾಗಿದ್ದಾರು. ಕೆ.ಶಿವರಾಮ್ ಅವರು ರಾಜ್ಯದ ಹಲವು ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

1993ರಲ್ಲಿ ಸಿನಿರಂಗಕ್ಕೆ ಎಂಟ್ರಿ ಕೊಟ್ಟಿದ್ದ ಶಿವರಾಮು ಅವರು, ನಾಗತಿಹಳ್ಳಿ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾದಲ್ಲಿ ನಾಯಕ ನಟನಾಗಿ ನಟಿಸಿದ್ದರು. ವಸಂತ ಕಾವ್ಯ, ಖಳನಾಯಕ, ಸಾಂಗ್ಲಿಯಾನ-3, ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಗೇಮ್ ಫಾರ್ ಲವ್ ಹಾಗೂ ಟೈಗರ್ ಸಿನಿಮಾಗಳಲ್ಲಿ ನಟಿಸಿದ್ದರು.

2013ರಲ್ಲಿ ಐಎಎಸ್‌ ಹುದ್ದೆಗೆ ರಾಜೀನಾಮೆ ನೀಡಿ, ಸ್ವಯಂ ನಿವೃತ್ತಿ ಪಡೆದ ಅವರು ಕಾಂಗ್ರೆಸ್‌ ಸೇರಿ, ರಾಜಕೀಯ ಆರಂಭಿಸಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಸೋಲುಂಡಿದ್ದರು. ಬಳಿಕ, ಕಾಂಗ್ರೆಸ್‌ ತೊರೆದು, ಬಿಜೆಪಿ ಸೇರಿದ್ದರು. ಅಲ್ಲದೆ, ಛಲವಾದಿ ಮಹಸಭಾ ಅಧ್ಯಕ್ಷರೂ ಆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ನ್ಯೂಜಿಲ್ಯಾಂಡ್!

'ನರಕ.. ಇರಾನ್ ಅಲ್ಲದವರಾದ್ರೆ ಮುಚ್ಕೊಂ*ರಿ': Khamenei ಸಾವಿಗೆ ಅಳುವ ಭಾರತೀಯ ಮುಸ್ಲಿಂ ಮಹಿಳೆಯರ ಲೇವಡಿ ಮಾಡಿದ ಇರಾನ್ ಮಹಿಳೆಯರು!

ಸೌದಿ ಅರೇಬಿಯಾ ಮೇಲೆ ದಾಳಿ ಬೇಡ: ನಾವು ಯುದ್ಧಕ್ಕೆ ಇಳಿಯಬೇಕಾಗುತ್ತೆ; ಇರಾನ್‌ಗೆ ಪಾಕಿಸ್ತಾನ ನೇರ ಧಮ್ಕಿ!

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

SCROLL FOR NEXT