ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರು: ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ, ಚಲನಶೀಲತೆ ಇಲ್ಲದ ಸಮಾಜದಲ್ಲಿ ಅಭಿವೃದ್ಧಿ ಸಾಧ್ಯವಿಲ್ಲ. ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅದಕ್ಕಾಗಿಯೇ ಸಂವಿಧಾನದ ಪೀಠಿಕೆವನ್ನು ಓದಿ ಅರ್ಥಮಾಡಿಕೊಂಡು ಅದರಂತೆ ನಡೆಯಬೇಕು. ಸಂವಿಧಾನದ ವಿರೋಧಿಗಳು ಸಮಾಜದಲ್ಲಿ ಬದಲಾವಣೆ ಬಯಸುವುದಿಲ್ಲ. ಸಂವಿಧಾನದ ಆಶಯಗಳನ್ನು ಈಡೇರಿಸಬೇಕು. ಇದಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದರು. 

ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನವಾಗಬೇಕು. ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದು ತಿಳಿಸಿದರು. 

ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರು ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ ಸಮಾಜದಲ್ಲಿ ಹುಟ್ಟಿದವರು. ಅವರು ಬೆಳೆದ ಎತ್ತರ ಜನರಿಗೆ ತಿಳಿಯಬಾರದೆಂದು ಇತಿಹಾಸ ತಿರುಚುವ ಪ್ರಯತ್ನ ಮಾಡಲಾಗಿದೆ. ಪಟ್ಟಭದ್ರ ಹಿತಾಸಕ್ತಿಗಳು ಈ ಕೆಲಸ ಮಾಡಿದ್ದರೂ ಮಾಡಿರಬಹುದು. ಅಮರ ಶಿಲ್ಪಿ ಜಕಣಾಚಾರಿ ಅವರ ಇತಿಹಾಸ ನಮ್ಮ ಮುಂದಿದೆ. ವಿಶ್ವಕರ್ಮ ಅಭಿವೃದ್ಧಿ ನಿಗಮ, ವಿಶ್ವಕರ್ಮ ಜಯಂತಿಯನ್ನು ಆಚರಿಸುವ ತೀರ್ಮಾನ ನಮ್ಮ ಸರ್ಕಾರವೇ ಹಿಂದೆ ಮಾಡಿತ್ತು ಎಂದರು. 

ನಮ್ಮ ಸಂವಿಧಾನ ಜಾತಿ ರಹಿತ, ವರ್ಗರಹಿತ, ಜಾತ್ಯಾತೀತ ಸಮಸಮಾಜ ನಿರ್ಮಾಣ ಮಾಡಬೇಕೆಂದು ಹೇಳಿದೆ. ಸ್ವಾರ್ಥಕ್ಕಾಗಿ ಸಮಾಜದಲ್ಲಿ ಅಸಮಾನತೆ ಉಂಟಾಗಿದೆ. ಶತ-ಶತಮಾನಗಳಿಂದ ಶೂದ್ರರು ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಅಸಮಾನತೆಗೆ ಬಲಿಯಾಗಿರುವ ವರ್ಗದ ಜನರಿಗೆ ಆರ್ಥಿಕ ಶಕ್ತಿ ತುಂಬಿ ಅವರು ಮುಖ್ಯವಾಹಿನಿಗೆ ಸೇರುವಂತಾಗಬೇಕು. ಎಲ್ಲರಿಗೂ ಅವಕಾಶ ಒದಗಿಸುವುದು ಸರ್ಕಾರದ ಜವಾಬ್ದಾರಿ ಹಾಗೂ ಕರ್ತವ್ಯ ಎಂದು ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್