ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಹೊಸ ವರ್ಷಾಚರಣೆ ವೇಳೆ ಬೆಂಗಳೂರಿನಲ್ಲಿ 300ಕ್ಕೂ ಅಧಿಕ ಡ್ರಿಂಕ್ ಅಂಡ್ ಡ್ರೈವ್ ಕೇಸ್

ಹೊಸ ವರ್ಷದ ಮುನ್ನಾದಿನದಂದು ಕುಡಿದು ವಾಹನ ಚಲಾಯಿಸಿದ 300 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರಿನಲ್ಲಿ ಡ್ರಿಂಕ್ ಅಂಡ್ ಡ್ರೈವ್
Srinivasa Murthy VN
Updated On : 2 Jan 2024, 8:26 am

ಬೆಂಗಳೂರು: ಹೊಸ ವರ್ಷದ ಮುನ್ನಾದಿನದಂದು ಕುಡಿದು ವಾಹನ ಚಲಾಯಿಸಿದ 300 ಕ್ಕೂ ಹೆಚ್ಚು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಹೊಸ ವರ್ಷದ ಮುನ್ನಾದಿನದಂದು ಬೆಂಗಳೂರು ಟ್ರಾಫಿಕ್ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿದ ಸುಮಾರು 330 ವಾಹನ ಚಾಲಕರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಇದನ್ನೂ ಓದಿ: ನೂತನ ವರ್ಷ 2024: ರಾಜ್ಯದಲ್ಲಿ ಉದ್ದೇಶಿತ ದೊಡ್ಡ ಪ್ರಾಜೆಕ್ಟ್ ಗಳು!

Advertisement

Advertisement

ಪೊಲೀಸರ ಪ್ರಕಾರ, ಭಾನುವಾರ ನಡೆಸಿದ ವಿಶೇಷ ಅಭಿಯಾನದಲ್ಲಿ 7,620 ಕ್ಕೂ ಹೆಚ್ಚು ವಾಹನಗಳನ್ನು ಪರಿಶೀಲಿಸಿದ್ದು, ತಪಾಸಣೆ ವೇಳೆ 330 ವಾಹನ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಹಲವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ವೇಳೆ, ಭಾನುವಾರ ಮತ್ತು ಸೋಮವಾರದ ನಡುವೆ ಬೆಂಗಳೂರು ಮತ್ತು ಸುತ್ತಮುತ್ತ 14 ರಸ್ತೆ ಅಪಘಾತಗಳು ವರದಿಯಾಗಿವೆ. ಈ ಕುರಿತು ಪ್ರಕಟಣೆ ನೀಡಿರುವ ಬೆಂಗಳೂರು ಸಂಚಾರ ಪೊಲೀಸರು, "ಡಿಸೆಂಬರ್ 31, 2023 ರಂದು ಮಧ್ಯರಾತ್ರಿಯವರೆಗೆ ಒಟ್ಟು ಒಂದು ಮಾರಣಾಂತಿಕ ಅಪಘಾತ ಮತ್ತು ಹತ್ತು ಮಾರಣಾಂತಿಕವಲ್ಲದ ಅಪಘಾತಗಳು ವರದಿಯಾಗಿವೆ" ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 'ಎಣ್ಣೆ'ಯ ಮತ್ತಿನಲ್ಲಿ ಮಿಂದೆದ್ದ ಜನತೆ: ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ; 193 ಕೋಟಿ ರೂ. ಮೌಲ್ಯದ ಮದ್ಯ ಮಾರಾಟ!

ಅಂತೆಯೇ, ಜನವರಿ 1, 2024 ರಂದು, ಮಧ್ಯರಾತ್ರಿ ಮತ್ತು ಬೆಳಿಗ್ಗೆ 7:00 ರ ನಡುವೆ, ಒಟ್ಟು ಮೂರು ಮಾರಣಾಂತಿಕ ಅಪಘಾತಗಳು ವರದಿಯಾಗಿವೆ ಎಂದು ತಿಳಿಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments