ರಾಜ್ಯ

ನಾರಾಯಣ ಗೌಡ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್, ಕರವೇ ಅಧ್ಯಕ್ಷರಿಗೆ ಇನ್ನೂ 4 ದಿನ ಜೈಲು ಫಿಕ್ಸ್

Lingaraj Badiger

ಬೆಂಗಳೂರು: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರ ಜಾಮೀನು ಅರ್ಜಿಯ ತೀರ್ಪುನ್ನು ಕೋರ್ಟ್ ಮಂಗಳವಾರ ಕಾಯ್ದಿರಿಸಿದ್ದು, ಅವರಿಗೆ ಇನ್ನೂ 4 ದಿನ ಜೈಲು ಫಿಕ್ಸ್ ಆಗಿದೆ. 

ಜಾಮೀನು ಕೋರಿ ನಾರಾಯಣ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ತೀರ್ಪು ಕಾಯ್ದಿರಿಸಿದ್ದು, ಜನವರಿ 6ರಂದು ಜಾಮೀನು ಬಗ್ಗೆ ಆದೇಶ ಪ್ರಕಟಿಸಲಿದೆ.

ಪ್ರಸ್ತುತ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ ಕರವೇಯ 32 ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಡಿಸೆಂಬರ್‌ 27ರಂದು (ಬುಧವಾರ) ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳಿಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ  ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

SCROLL FOR NEXT