ಹಿಂಡಲಗಾ ಕೇಂದ್ರ ಕಾರಾಗೃಹ 
ರಾಜ್ಯ

ಬೆಳಗಾವಿ: ಹೆಚ್ಚುವರಿ ವರದಕ್ಷಿಣೆ ಕೇಳಿ ಮದುವೆಯಾಗಲು ನಿರಾಕರಿಸಿದ ವರ ಇದೀಗ ಹಿಂಡಲಗಾ ಜೈಲು ಪಾಲು

ಬೆಳಗಾವಿ ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದಕ್ಕಾಗಿ ವರನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಖಾನಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಹಿಂಡಲಗಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. 

ಬೆಳಗಾವಿ: ಜಿಲ್ಲೆಯಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದಕ್ಕಾಗಿ ವರನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಖಾನಾಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯನ್ನು ಹಿಂಡಲಗಾ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಜೈಲು ಪಾಲಾದ ವರನನ್ನು ಸಚಿನ್ ಪಾಟೀಲ್ ಎಂದು ಗುರುತಿಸಲಾಗಿದೆ.

ವರನಿಗೆ 50 ಗ್ರಾಂ ಚಿನ್ನ ಮತ್ತು 1 ಲಕ್ಷ ನಗದು ನೀಡಲು ವಧುವಿನ ಮನೆಯವರು ಒಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಲೋಕಮಾನ್ಯ ಚೌಲ್ಟ್ರಿಯಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ, ಮದುವೆ ದಿನಾಂಕ ಹತ್ತಿರ ಬರುತ್ತಿದ್ದಂತೆ ವರನ ಮನೆಯವರು 100 ಗ್ರಾಂ ಚಿನ್ನಾಭರಣ ಹಾಗೂ 10 ಲಕ್ಷ ರೂ. ವರದಕ್ಷಿಣೆ ನೀಡುವಂತೆ ಬೇಡಿಕೆ ಇಟ್ಟಿದ್ದರು.

ವಧುವಿನ ಕುಟುಂಬವು ಅವರ ಹೊಸ ಬೇಡಿಕೆಯನ್ನು ಪೂರೈಸಲು ನಿರಾಕರಿಸಿದಾಗ, ಆರೋಪಿ ಸಚಿನ್ ಪಾಟೀಲ್ ಮದುವೆಯನ್ನು ನಿರಾಕರಿಸಿದ್ದರು.

ಮದುವೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ವಧುವಿನ ಮನೆಯವರು ವರನ ವಿರುದ್ಧ ಖಾನಾಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮದುಮಗನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT