ದುಷ್ಕರ್ಮಿಗಳು ನಡೆಸಿದ ಹಲ್ಲೆಯಲ್ಲಿ ವಾಹನ, ಮನೆಯ ಕಿಟಕಿಗೆ ಹಾನಿಯುಂಟಾಗಿರುವುದು 
ರಾಜ್ಯ

ಬೆಳಗಾವಿ: ದುಷ್ಕರ್ಮಿಗಳಿಂದ ಪಂಚಾಯತ್ ಸದಸ್ಯನ ಮನೆ ಮೇಲೆ ದಾಳಿ, ವಾಹನ-ವಸ್ತುಗಳಿಗೆ ಹಾನಿ; ಪ್ರೇಮ ಪ್ರಕರಣ ಕಾರಣ?

ಜಿಲ್ಲೆಯ ನವಗಿ ಗ್ರಾಮದಲ್ಲಿ  ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬೆಳಗಾವಿ: ಜಿಲ್ಲೆಯ ನವಗಿ ಗ್ರಾಮದಲ್ಲಿ  ನಿನ್ನೆ ಜನವರಿ 1ರ ಹೊಸವರ್ಷ ರಾತ್ರಿ ಸುಮಾರು 30 ಜನ ಮುಸುಕುಧಾರಿ ಗ್ಯಾಂಗ್ ಅಟ್ಟಹಾಸ ಮೆರೆದಿದ್ದು, ಸುತ್ತಮುತ್ತ ನಿವಾಸಿಗಳು ಭಯಭೀತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬೆಳಗಾವಿ ಜಿಲ್ಲೆಯ ನವಗಿ ಗ್ರಾಮದಲ್ಲಿ ಆಯುಧಗಳು, ಕತ್ತಿಗಳು ಮತ್ತು ದೊಣ್ಣೆಗಳನ್ನು ಹಿಡಿದು ದುಷ್ಕರ್ಮಿಗಳು ಮುಖ್ಯವಾಗಿ ನಾಲ್ಕು ಮನೆಗಳ ಮೇಲೆ ದಾಳಿ ನಡೆಸಿದ್ದು ಮಾತ್ರವಲ್ಲದೆ ವಾಹನಗಳು ಮತ್ತು ಇತರ ವಸ್ತುಗಳನ್ನು ಹಾನಿಗೊಳಿಸಿದ್ದಾರೆ.

ದಾಳಿಗೆ ಒಳಗಾದವರಲ್ಲಿ ಮಾಜಿ ಮತ್ತು ಹಾಲಿ ಪಂಚಾಯಿತಿ ಸದಸ್ಯರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ಪಡೆದ ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರೇಮ ಪ್ರಕರಣದ ವಿವಾದವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT