ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ನ್ಯೂ ಇಯರ್ ಪಾರ್ಟಿಗೆ ಹಣ ಕೊಡಲು ಪೋಷಕರ ನಿರಾಕರಣೆ: ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಹೊಸ ವರ್ಷದ ಪಾರ್ಟಿಗೆ ಪೋಷಕರು ಹಣ ನೀಡಲು ನಿರಾಕರಿಸಿದ್ದರಿಂದ ಬೆಳಗಾವಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ: ಹೊಸ ವರ್ಷದ ಪಾರ್ಟಿಗೆ ಪೋಷಕರು ಹಣ ನೀಡಲು ನಿರಾಕರಿಸಿದ್ದರಿಂದ ಬೆಳಗಾವಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗಾವಿ ತಾಲೂಕಿನ ಕಣಬರ್ಗಿ ಗ್ರಾಮದ ಸಿದ್ದರಾಯ ಅಡಿವೆಪ್ಪ ಶೀಗಿಹಳ್ಳಿ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಮೂಲಗಳ ಪ್ರಕಾರ, ಉದ್ಯೋಗವಿಲ್ಲದ ಸಿದ್ದಯ್ಯ ಭಾನುವಾರ ರಾತ್ರಿ ಹೊಸ ವರ್ಷದ ಪಾರ್ಟಿ ಆಚರಿಸಲು ಪೋಷಕರಿಂದ 10,000 ರೂ. ಕೇಳಿದ್ದಾನೆ. ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿರುವ ಪೋಷಕರು ಹಣ ನೀಡಲು ನಿರಾಕರಿಸಿದ್ದಾರೆ.

ಕೋಪ ಮತ್ತು ಹತಾಶೆಯಿಂದ ಸಿದ್ದಯ್ಯ ತನ್ನ ತಂದೆ-ತಾಯಿಗೆ ತೋಟಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದಾನೆ. ಬಳಿಕ ಆತನ ವರ್ತನೆಯಿಂದ ಅನುಮಾನಗೊಂಡ ಪೋಷಕರು ಜಮೀನಿಗೆ ತೆರಳಿ ಆತನನ್ನು ಹುಡುಕಿದ್ದಾರೆ.

ಜಮೀನಿನಲ್ಲಿದ್ದ ಮರಕ್ಕೆ ಆತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ತಕ್ಷಣ ಆತನ ಮೃತದೇಹವನ್ನು ಹೊರತೆಗೆದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಹೋಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಮೃತನಾಗಿದ್ದಾನೆ ಎಂದು ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!