ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಧಿಕಾರಿಗಳು ಬಡವರ ಕಣ್ಣೀರು ಒರೆಸುವ ಕೆಲಸ ಮಾಡಬೇಕು: ಸಿಎಂ ಸಿದ್ದರಾಮಯ್ಯ 

ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು  ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. 

ಬೆಂಗಳೂರು: ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು  ಅಧಿಕಾರಿಗಳು ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದರು. 

ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದರು. 

ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ಹೃದಯ ಮಿಡಿಯಬೇಕು. ಅಧಿಕಾರಿಗಳು ಒಳ್ಳೆ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಈ ಜವಾಬ್ದಾರಿಯನ್ನು ನಿರ್ವಹಿಸಿ, ಮಧ್ಯವರ್ತಿಗಳನ್ನು ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು ಎಂದು ತಾಕೀತು ಮಾಡಿದರು. 

ನಾವು ನೀವು ರಾಜ್ಯದ 7 ಕೋಟಿ ಜನರ ಹಿತ ಕಾಯುವುದಕ್ಕಾಗಿ ಇದ್ದೇವೆ. ರಾಜಕಾರಣಿಗಳು ಜನರಿಂದ ರಿನೀವಲ್ ಆದರೆ ಮಾತ್ರ ಐದು ವರ್ಷದ ಬಳಿಕವೂ ಜನ ಸೇವೆಯಲ್ಲಿ ಇರ್ತಾರೆ. ಆದರೆ ಕೆಎಎಸ್ ಅಧಿಕಾರಿಗಳು 30 ವರ್ಷಗಳ‌ ಕಾಲ ನಿರಂತರ ಜನ ಸೇವೆಯಲ್ಲಿ ಇರುತ್ತಾರೆ. ಆದ್ದರಿಂದ ಹೆಚ್ಚು ಜನಪರವಾಗಿ ಇದ್ದು ಜನರ ಕಷ್ಟ ಸುಖಗಳಿಗೆ ಸ್ಪಂದಿಸಬೇಕು ಎಂದರು. 

ರಾಜಕಾರಣಗಳಿಗೆ, ಅಧಿಕಾರಿಗಳಿಗೆ ಜನರು ಸವಲತ್ತುಗಳನ್ನು ಒದಗಿಸಿದ್ದಾರೆ. ಜನರ ತೆರಿಗೆ ಹಣದಲ್ಲಿ ನಮಗೆ ಸವಲತ್ತುಗಳು ಸಿಕ್ಕಿವೆ. ಸುಗಮ ಜನಪರ ಆಡಳಿತ ಕೊಡಲಿ ಎನ್ನುವ ಕಾರಣದಿಂದ ಜನರಿಂದ ನಮಗೆ ಸವಲತ್ತು ಸಿಕ್ಕಿವೆ. ಜನರ ಅಭ್ಯದಯ ನಮ್ಮ ಗುರಿ ಆಗಬೇಕು. ಬಲಾಡ್ಯರು ದುರ್ಬಲರ ಮೇಲೆ ದೌರ್ಜನ್ಯ ನಡೆಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.

ಸರ್ಕಾರದ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಿ.  ಸಣ್ಣ ಪುಟ್ಟ ರೆವಿನ್ಯೂ ಸಮಸ್ಯೆಗಳಿಗೆ ಜನರು ನನ್ನ ಬಳಿಗೆ ಬರುತ್ತಾರೆ ಎಂದರೆ ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದೇ ಪರಿಗಣಿಸಬೇಕಾಗುತ್ತದೆ ಎಂದು ಹೇಳಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT