ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ತಾಯಿ ಮತ್ತು ಇಬ್ಬರು ಮಕ್ಕಳ ಶವ ಪತ್ತೆ, ಸಾವಿನ ಕಾರಣ ನಿಗೂಢ

ಒಂದೇ ಮನೆಯಲ್ಲಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ನಗರದ ಹೊರ ವಲಯದಲ್ಲಿ ನಡೆದಿದೆ.

ಹಾಸನ: ಒಂದೇ ಮನೆಯಲ್ಲಿ ತಾಯಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಹಾಸನ ನಗರದ ಹೊರ ವಲಯದಲ್ಲಿ ನಡೆದಿದೆ. ಮೃತರನ್ನು ತಾಯಿ ಶಿವಮ್ಮ (36) ಮತ್ತು ಅವರ 7 ವರ್ಷದ ಪುತ್ರಿ ಹಾಗೂ 9 ವರ್ಷದ ಮಗ ಎಂದು ಗುರುತಿಸಲಾಗಿದೆ

ಮೃತ ಶಿವಮ್ಮನಿಗೆ ಕಳೆದ 12 ವರ್ಷಗಳ ಹಿಂದೆ ಮದುವೆಯಾಗಿತ್ತು. ದಾಂಪತ್ಯದಲ್ಲಿಯೂ ಯಾವುದೇ ಕಿರಿಕಿರಿ ಇರಲಿಲ್ಲ. ಗಂಡ ಹೆಂಡತಿ ಅನ್ಯೋನ್ಯವಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಶಿವಮ್ಮನ ಪತಿ ತುಮಕೂರಿನ ಬೇಕರಿವೊಂದರಲ್ಲಿ ಕೆಲಸ ಮಾಡಿಕೊಡಿದ್ದರು. ಗಂಡ ಮನೆಯಲ್ಲಿ ಇಲ್ಲದ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ತುಮಕೂರಿನಲ್ಲಿ ಬೇಕರಿ ಕೆಲಸಕ್ಕೆಂದು ಒಂದು ತಿಂಗಳ ಹಿಂದೆ ಹೋಗಿದ್ದೆ. ಸೋಮವಾರ ಸಂಜೆ ವಿಡಿಯೋ ಕಾಲ್​ ಕಾಲ್​ ಮಾಡಿ ಹೆಂಡತಿ ಮಕ್ಕಳೊಂದಿಗೆ ಮಾತನಾಡಿದ್ದೇನೆ. ಇವತ್ತು ಕೋರ್ಟ್​ ನಲ್ಲಿ ಕೆಲಸವಿದ್ದ ಕಾರಣ ತುಮಕೂರಿನಿಂದ ಹಾಸನಕ್ಕೆ ಬರುತ್ತೇನೆ ಎಂದು ಹೇಳಿದ್ದೆ. ಆಚೆ ಕಡೆ ಹೋಗೋಣ ಎಂದು ಕೂಡ ಹೇಳಿದ್ದೆ.

ಹಾಸನಕ್ಕೆ ಬಂದ ಮೇಲೆ 3-4 ಬಾರಿ ಫೋನ್ ಮಾಡಿದಾಗ ಸ್ವಿಚ್ ಆಫ್ ಆಗಿತ್ತು. ಮನೆ ಬಳಿಕ ಬಂದು ನೋಡಿದಾಗಲೂ ಯಾರೂ ಇರಲಿಲ್ಲ. ಎಲ್ಲಾ ಕಡೆ ಹುಡುಕಾಡಿದೆ, ಆದರೂ ಪತ್ತೆ ಆಗಲಿಲ್ಲ. ಮತ್ತೆ ಮನೆ ಹತ್ತಿರ ಬಂದಾಗ ಗ್ಯಾಸ್​ ವಾಸನೆ ಬಂತು. ಆದರೇ, ಬಾಗಿಲು ಮತ್ತು ಎಲ್ಲಾ ಕಿಟಕಿಗಳನ್ನು ಮುಚ್ಚಲಾಗಿತ್ತು. ಮನೆ ಬಾಗಿಲಿಗೆ ಬೀಗ ಹಾಕಿದ್ದರಿಂದ ಹೊರಗಡೆ ಹೋಗಿರಬಹುದು ಎಂದು ಮನೆ ಬಳಿ ಸ್ವಲ್ಪ ಹೊತ್ತು ಕಾದು ಕುಳಿತಿದ್ದೆ. ನಂತರ ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಮೃತ ಶಿವಮ್ಮಳ ಪತಿ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ಮಾಡಿದ್ದು, ಮೃತದೇಹಗಳನ್ನು ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT