ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣ ರೀ ಓಪನ್ ಮಾಡಲಾಗಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ

ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ಬಾಬಾಬುಡನ್​ಗಿರಿಯಲ್ಲಿ ಗೋರಿ ಧ್ವಂಸ ಪ್ರಕರಣ ರೀ‌ ಓಪನ್ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಸುದ್ದಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, 2017ರಲ್ಲಿ ದಾಖಲಾಗಿದ್ದ ಕೇಸ್​ನ ಸಹಜ ಪ್ರಕ್ರಿಯೆ. ಸಹಜ ಕಾನೂನು ಪ್ರಕ್ರಿಯೆಯ ಭಾಗವಾಗಿ ಆರೋಪಿಗಳಿಗೆ ಕೋರ್ಟ್​​ ಸಮನ್ಸ್ ನೀಡಿದೆ ಅಷ್ಟೇ ಎಂದು ಹೇಳಿದ್ದಾರೆ.

ಜನವರಿ 8ರಂದು ಕೋರ್ಟ್​ಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಸರ್ಕಾರ ಮರು ತನಿಖೆಗೆ ಮುಂದಾಗಿದೆ ಅನ್ನುವುದು ಸುಳ್ಳು. ಇದು ತಪ್ಪು, ದುರುದ್ದೇಶಪೂರಿತ ಸುದ್ದಿಯಾಗಿದೆ ಎಂದು ತಿಳಿಸಿದ್ದಾರೆ.

2020ರ ಮಾರ್ಚ್ 19 ರಂದು ವಿಚಾರಣೆಗೆ ಅನುಮತಿಗಾಗಿ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಅದರ ಆಧಾರದಲ್ಲಿ 2023ರ ಸೆಪ್ಟೆಂಬರ್ 7ರಂದು ಸರ್ಕಾರ ಅನುಮತಿ ನೀಡಿತ್ತು. 2023ರ ಅಕ್ಟೋಬರ್ 24 ರಂದು ಆರೋಪಿಗಳ ವಿರುದ್ಧ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು. ಬಳಿಕ ಈ ಕಾನೂನು ಪ್ರಕ್ರಿಯೆಯ ಮುಂದುವರೆದ ಭಾಗವಾಗಿ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದು ಜನವರಿ 8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯದಿಂದಲೇ ಸಮನ್ಸ್ ಜಾರಿ ಮಾಡಲಾಗಿದೆ.

ಇದಿಷ್ಟೂ ಕೂಡ ಯಾವುದೇ ಒಂದು ಪ್ರಕರಣದಲ್ಲಿ ಸಹಜವಾಗಿ ನಡೆಯುವ ಕಾನೂನು ಪ್ರಕ್ರಿಯೆಯಾಗಿದೆ. ಆದ್ದರಿಂದ ಪ್ರಕರಣದ ಮರು ತನಿಖೆಗೆ ಸರ್ಕಾರ ಮುಂದಾಗಿದೆ ಎನ್ನುವುದು ಸುಳ್ಳು ವದಂತಿ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT