ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನ: ಹುಟ್ಟಿದ ಮಾರನೇ ದಿನವೇ ನವಜಾತ ಶಿಶು ಮಾರಾಟ; ತಾಯಿ ಸೇರಿ ಐವರ ಬಂಧನ

ಹುಟ್ಟಿದ ಮಾರನೇ ದಿನವೇ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. 

ಹಾಸನ: ಹುಟ್ಟಿದ ಮಾರನೇ ದಿನವೇ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆ ಹಾಸನದಲ್ಲಿ ನಡೆದಿದೆ. 

ಸಕಲೇಶಪುರದ ಬ್ಯಾಕರಹಳ್ಳಿಯಲ್ಲಿ ಒಂದು ದಿನದ ಗಂಡು ಮಗುವನ್ನ ಮಾರಾಟ ಮಾಡಿದ ಆರೋಪದಡಿ ತಾಯಿ ಗಿರಿಜಾ, ಆಶಾ ಕಾರ್ಯಕರ್ತೆ ಸುಮಿತ್ರಾ, ಮಗು ಖರೀದಿಸಿದ ಮಹಿಳೆ ಉಷಾ, ಶ್ರೀಕಾಂತ್, ಸುಬ್ರಮಣ್ಯ ಎಂಬುವರನ್ನು ಬಂಧಿಸಲಾಗಿದೆ.

ಕಳೆದ ವರ್ಷ ನವೆಂಬರ್ 15ರಂದು ಗಿರಿಜಾ ಗಂಡು ಮಗುವಿಗೆ ಜನ್ಮ ನೀಡಿದ್ದರು. ಆದರೆ ತಮಗೆ ಈಗಾಗಲೇ ಇಬ್ಬರು ಮಕ್ಕಳಿರುವುದರಿಂದ ನವೆಂಬರ್ 16ರಂದು ಆಶಾ ಕಾರ್ಯಕರ್ತೆ ಸುಮಿತ್ರಾ ಮೂಲಕ ಚಿಕ್ಕಮಗಳೂರು ಮೂಲದ ಉಷಾ ಎಂಬುವರಿಗೆ ಮಗು ಮಾರಾಟ ಮಾಡಿದ್ದರು.

ಈ ಪ್ರಕರಣವನ್ನು ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕಾಂತರಾಜ್ ಬಯಲಿಗೆಳೆದಿದ್ದು ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT