ಧರಣಿನಿರತ ಅತಿಥಿ ಉಪನ್ಯಾಸಕರನ್ನು ವಶಕ್ಕೆ ಪಡೆದ ಪೊಲೀಸರು. 
ರಾಜ್ಯ

ಅತಿಥಿ ಉಪನ್ಯಾಸಕರ ಪಾದಯಾತ್ರೆ: ಬೆಂಗಳೂರು ಪ್ರವೇಶಕ್ಕೆ ಪೊಲೀಸರ ತಡೆ

ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮೊದಲೇ ಪೊಲೀಸರು ಬುಧವಾರ ತಡೆದಿದ್ದು, ಎಲ್ಲರನ್ನೂ ವಶಕ್ಕೆ ಪಡೆದರು.

ಬೆಂಗಳೂರು: ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮೊದಲೇ ಪೊಲೀಸರು ಬುಧವಾರ ತಡೆದಿದ್ದು, ಎಲ್ಲರನ್ನೂ ವಶಕ್ಕೆ ಪಡೆದರು.

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನೂ ಬಸ್‌ಗಳಲ್ಲಿ ಕರೆತಂದು ಸ್ವಾತಂತ್ರ್ಯ ಉದ್ಯಾನದ ಬಳಿ ಇಳಿಸಿದರು.

ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಜ.1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಿದ್ದರು.

ಆಮ್ ಆದ್ಮಿ ಪಕ್ಷದ ರಾಜ್ಯ ಮುಖ್ಯಸ್ಥ ಹಾಗೂ ಮಾಜಿ ಶಾಸಕ ಮುಕ್ಯಮಂತ್ರಿ ಚಂದ್ರು ಅವರು ನೆಲಮಂಗಲದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಳಗ್ಗೆ ಭೇಟಿ ಮಾಡಿದರು.

ದೆಹಲಿ ಎಎಪಿ ಸರ್ಕಾರದ ಮಾದರಿಯಲ್ಲಿ ಅವರ ಸೇವೆಗಳನ್ನು ಕ್ರಮಬದ್ಧಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT