ಬಿ.ಕೆ ಹರಿಪ್ರಸಾದ್ 
ರಾಜ್ಯ

ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಿಲ್ಲ: ಗೃಹ ಸಚಿವ ಜಿ ಪರಮೇಶ್ವರ್

ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ರಾಮಮಂದಿರ ಉದ್ಘಾಟನೆ ವೇಳೆ ಬಿಜೆಪಿ ಗೋಧ್ರಾ ಹತ್ಯಾಕಾಂಡದ ರೀತಿ ಮಾಡಲು ಪ್ಲ್ಯಾನ್ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ಹರಿಪ್ರಸಾದ್‌ ವಿವಾದದ ಹೇಳಿಕೆಗೆ ಯಾವುದೇ ನೋಟಿಸ್ ಕೊಡಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ‌ಮಾತನಾಡಿದ ಅವರು, ಹರಿಪ್ರಸಾದ್‌ ಹೇಳಿಕೆ ಬಗ್ಗೆ ಗೃಹ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಅಂತಹ ಮಾಹಿತಿ ಬಂದರೆ, ಅದನ್ನ ನಿರ್ವಹಿಸಲು  ನಮ್ಮ ಇಲಾಖೆ ಸಮರ್ಥವಾಗಿದೆ. ಅಂತಹ ಘಟನೆಗಳು ಆಗಲು ನಾವು ಬಿಡುವುದಿಲ್ಲ. ಸಂದರ್ಭ ಬಂದರೆ ಹರಿಪ್ರಸಾದ್‌ ಅವರನ್ನ ಕರೆದು ಬೇಕಾದರೆ ಕೇಳೋಣ ಎಂದರು.

ನಮ್ಮ ಇಲಾಖೆಗೆ ಇದನ್ನ ಹೇಗೆ ಹ್ಯಾಂಡಲ್ ಮಾಡಬೇಕು ಅಂತ ಗೊತ್ತಿದೆ. ಹರಿಪ್ರಸಾದ್‌ ಹಿರಿಯ ನಾಯಕರು. ಅವರು ಹೇಳಬೇಕಿದ್ರೆ ಅವರ ಬಳಿ ಮಾಹಿತಿ ಇರಬೇಕು. ಹರಿಪ್ರಸಾದ್‌ಗೆ ನೋಟಿಸ್ ಕೊಟ್ಟು ಕರೆಯೋ ಅವಶ್ಯಕತೆ ‌ಇಲ್ಲ.‌ ಹೇಳಿಕೆ ಕೊಟ್ಟವರಿಗೆಲ್ಲಾ ನೋಟಿಸ್ ಕೊಡೋಕೆ ಹೋದ್ರೆ ಎಷ್ಟು ಜನರಿಗೆ ನೋಟಿಸ್‌ ಕೊಡಬೇಕಾಗುತ್ತೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ