ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾಗೆ ನಾಲ್ವರು ಬಲಿ, 298 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಮತ್ತು 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ...

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗುರುವಾರ ಕೊರೋನಾದಿಂದ ನಾಲ್ವರು ಮೃತಪಟ್ಟಿದ್ದಾರೆ ಮತ್ತು 298 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ನಾಲ್ವರು ಮೃತಪಟ್ಟಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1240ಕ್ಕೆ ಏರಿಕೆಯಾಗಿದೆ.

ಇಂದು ಕೋವಿಡ್ ನಿಂದ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.82 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿತರಲ್ಲಿ 1,168 ಮಂದಿ ಮನೆ ಆರೈಕೆಗೆ ಒಳಗಾದರೆ, 72 ಮಂದಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 9 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದು, 172 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

ಬಾಗಲಕೋಟೆ ಉಪಚುನಾವಣೆ: BJP ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು ಪೊಲೀಸ್ ಅಧಿಕಾರಿಗಳ ಎತ್ತಂಗಡಿ!

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಅಕ್ರಮ ಬಾಂಗ್ಲಾ ವಲಸಿಗರಿಗೆ ಹೊಸ ತಲೆನೋವು; ಗಡಿಗಳಲ್ಲಿ ಹಾವು. ಮೊಸಳೆಗಳ ನಿಯೋಜನೆ: BSF ಗಂಭೀರ ಚಿಂತನೆ!

ಇರಾನ್ ವಿರುದ್ಧದ ಯುದ್ಧ ಅಮೆರಿಕಾಗೆ ತಿರುಗುಬಾಣ!: ಇಂಧನ, ಸಾರಿಗೆ ದರ ದುಪ್ಪಟ್ಟು, ಜನಸಾಮಾನ್ಯರು ಹೈರಾಣ; ಟ್ರಂಪ್ ಗೆ ಹಿಡಿಶಾಪ!

SCROLL FOR NEXT