ಸುಧಾಕರ್‌ ಶೆಟ್ಟಿ 
ರಾಜ್ಯ

ಬಿಜೆಪಿ ಹಿರಿಯ ನಾಯಕ, ಹೊಟೇಲ್‌ ಉದ್ಯಮಿ ಬಿ.ಸುಧಾಕರ್‌ ಶೆಟ್ಟಿ ನಿಧನ

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲೀಕ ಸುಧಾಕರ ಶೆಟ್ಟಿ ಅವರು ಗುರುವಾರ ವಿಧಿವಶರಾಗಿದ್ದಾರೆ.

ಉಡುಪಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಹಾಗೂ ಶಾರದಾ ಇಂಟರ್ನ್ಯಾಷನಲ್ ಹೋಟೆಲ್ ಮಾಲೀಕ ಸುಧಾಕರ ಶೆಟ್ಟಿ ಅವರು ಗುರುವಾರ ವಿಧಿವಶರಾಗಿದ್ದಾರೆ.
     
ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಇಂಟರ್ ನ್ಯಾಶನಲ್ ಹೊಟೇಲ್ ಮಾಲಕರಾಗಿದ್ದ ಸುಧಾಕರ್ ಶೆಟ್ಟಿ ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು.

2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಸೋಲು ಕಂಡಿದ್ದರು.

2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2013ರ ಚುನಾವಣೆಯಲ್ಲಿ ಹಾಲಿ ಶಾಸಕರಾಗಿದ್ದ ರಘುಪತಿ ಭಟ್ ಸಿಡಿ ಗದ್ದಲದಿಂದ ಸ್ಪರ್ಧಿಸಲು ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಧಾಕರ್ ಶೆಟ್ಟಿ ಕಣಕ್ಕಿಳಿದಿದ್ದರು. ಆದರೆ, ಪ್ರಮೋದ್ ಮಧ್ವರಾಜ್ ವಿರುದ್ಧ ಸೋಲು ಕಂಡಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದರು. ಉಡುಪಿ ನಗರ ಸಭೆಯ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ