ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ ನಾಯಕರು. 
ರಾಜ್ಯ

ಶ್ರೀಕಾಂತ್ ಪೂಜಾರಿ ಬಂಧನ: ರಾಜಭವನದ ಕದ ತಟ್ಟಿದ ಬಿಜೆಪಿ, ದೂರು ಸಲ್ಲಿಕೆ

ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬುಧವಾರ ತೀವ್ರ ಹೋರಾಟ ನಡೆಸಿತು. ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಪಾಲರಿಗೂ ದೂರನ್ನು ನೀಡಿದೆ.

ಬೆಂಗಳೂರು: ರಾಮ ಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಕರಸೇವಕನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಬುಧವಾರ ತೀವ್ರ ಹೋರಾಟ ನಡೆಸಿತು. ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಪಾಲರಿಗೂ ದೂರನ್ನು ನೀಡಿದೆ.

ನಗರದ ಫ್ರೀಡಂ ಪಾರ್ಕ್​ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ನಂತರ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದರು.

ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರನ್ನು ಭೇಟಿಯಾಗಿ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣ ಸಂಬಂಧ ಮಾತುಕತೆ ನಡೆಸಿದರು.

31 ವರ್ಷದ ಹಿಂದೆ ಪ್ರಕರಣಕ್ಕೆ ಉದ್ದೇಶಪೂರ್ವಕವಾಗಿ ಕೇಸ್​ಗೆ ಸಂಬಂಧಿಸಿದಂತೆ​ಇದೀಗ ಕೆಲವರನ್ನು ಬಂಧಿಸಲಾಗಿದೆ ಎನ್ನುವ ವಿವರಗಳನ್ನು ನೀಡಿದರು.

ಪೊಲೀಸ್ ಕ್ರಮ ಹಾಗೂ ನಂತರದಲ್ಲಿನ ಬೆಳವಣಿಗೆಗಳ ಕುರಿತು ಮಾಧ್ಯಮಗಳ ವರದಿಗಳ ಜೊತೆಗೆ ರಾಜ್ಯಪಾಲರಿಗೆ ಮನವಿ ಪತ್ರ ನೀಡಿ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದರು.

ರಾಜ್ಯಪಾಲರ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ''ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಬಂಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ಕುರಿತು ನಾವು ರಾಜ್ಯಪಾಲರಿಗೆ ವಿವರ ನೀಡಿದ್ದೇವೆ. ತಕ್ಷಣ ರಾಜ್ಯ ಸರ್ಕಾರದಿಂದ ವಿವರವನ್ನು ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದೇವೆಂದು ಹೇಳಿದರು.

ಇಡೀ ರಾಜ್ಯದಲ್ಲಿ ಮಾತ್ರವಲ್ಲದೆ ಇಡೀ ದೇಶದಲ್ಲಿ ಇಂದು ರಾಮಜಪ ನಡೆಯುತ್ತಿದೆ. ಜನವರಿ 22 ರಂದು ಲೋಕಾರ್ಪಣೆಯಾಗಲಿರುವ ರಾಮ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾತರತೆಯ ವಾತಾವರಣವನ್ನು ನೋಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ನಡವಳಿಕೆ, ಸಿಎಂ, ಕಾಂಗ್ರೆಸ್ ಸರ್ಕಾರದ ನಡವಳಿಕೆ ಅನುಮಾನ ತರಿಸುತ್ತಿದೆ.

ಹಿಂದೂ ವಿರೋಧಿ ನೀತಿ ಅಳವಡಿಸಿಕೊಂಡಿರುವ ಸರ್ಕಾರ ರಾಮ ಭಕ್ತರ ವಿರುದ್ಧ ಕ್ರಮದ ಹಿಂದೆ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಹುನ್ನಾರ ಅಡಗಿದೆ. ಪೊಲೀಸರು ಕೂಡ ಸರ್ಕಾರದ ಜೊತೆ ಕೈಜೋಡಿಸಿರುವುದು ಸರಿಯಲ್ಲ. ರಾಜ್ಯಪಾಲರು ತಕ್ಷಣ ಈ ವಿಚಾರದಲ್ಲಿ ವಿವರವನ್ನು ತರಿಸಿಕೊಳ್ಳಬೇಕು ಎಂದು ಒತ್ತಾಯ ಮಾಡಿದ್ದೇವೆ. ತಕ್ಷಣ ರಾಜ್ಯ ಸರ್ಕಾರದಿಂದ ಸವಿಸ್ತಾರವಾದ ವರದಿ ಪಡೆದುಕೊಳ್ಳುವುದಾಗಿ ರಾಜ್ಯಪಾಲರು ತಿಳಿಸಿದ್ದಾರೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel