ರಾಜ್ಯ

ಕರಾವಳಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

Ramyashree GN

ಮಂಗಳೂರು: ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಉತ್ತಮ ಮಳೆಯಾಗಿದ್ದು, ಬಿಸಿಲಿನ ತಾಪಕ್ಕೆ ಅಲ್ಪ ವಿರಾಮ ನೀಡಿದಂತಾಗಿದೆ.

ಹವಾಮಾನ ಇಲಾಖೆ ಮೂಲಗಳ ಪ್ರಕಾರ, ಈ ಜಿಲ್ಲೆಗಳಲ್ಲಿ 5.5 ಮಿಮೀ ಮಳೆ ಸುರಿದಿದ್ದು, ಈ ಅವಧಿಯಲ್ಲಿ ಸಾಮಾನ್ಯ ಸರಾಸರಿ ಮಳೆ 0.11 ಮಿಮೀ ಆಗಿದೆ.

ಸಮುದ್ರ ಮಟ್ಟದಲ್ಲಿ ಕಡಿಮೆ ಒತ್ತಡದಿಂದಾಗಿ ಸಮುದ್ರ ಮಟ್ಟದಿಂದ ಸುಮಾರು 5.8 ಕಿಮೀ ಎತ್ತರದಲ್ಲಿ ಸುಂಟರಗಾಳಿ ಉಂಟಾಯಿತು. ಇದರಿಂದಾಗಿ ಈ ಎರಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ದಕ್ಷಿಣ ಕನ್ನಡದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯ ಇತರೆಡೆ ತುಂತುರು ಮಳೆಯಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿರುವುದರಿಂದ ಗುರುವಾರ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

SCROLL FOR NEXT