ರಾಜ್ಯ

ಹೋರಾಟಗಾರರ ವಿರುದ್ಧದ ಪ್ರಕರಣಗಳ ಹಿಂಪಡೆಯಿರಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆಗ್ರಹ

Manjula VN

ಬೆಂಗಳೂರು: ಕನ್ನಡಪರ ಹೋರಾಟಗಾರರು, ರೈತರು, ಅಂಗನವಾಡಿ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ರೈತ ಮುಖಂಡರು, ಕನ್ನಡಪರ ಹೋರಾಟಗಾರರು, ಶಿಕ್ಷಣ ತಜ್ಞರು ಒಳಗೊಂಡ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆರೋಪಿಸಿದೆ.

ಅಧಿಕಾರಕ್ಕೆ ಬರುವ ಮುನ್ನ ಸಿಎಂ ಸಿದ್ದರಾಮಯ್ಯ ಅವರು ಪ್ರತಿಭಟನೆಗಳನ್ನು ಪ್ರಜಾಪ್ರಭುತ್ವದ ಪ್ರಮುಖ ಭಾಗ ಎಂದು ಹೇಳುತ್ತಿದ್ದರು, ಆದರೆ, ಈಗ ಅವರ ಸರ್ಕಾರವೇ ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ ಎಂದು ಸಮಿತಿ ಕಿಡಿಕಾರಿದೆ.

ಸಮಿತಿ ಮುಖಂಡರಾಗಿರುವ ಕುರುಬೂರು ಶಾಂತಕುಮಾರ್ ಮಾತನಾಡಿ, ಭಾಷೆ, ನೆಲ, ಜಲಕ್ಕಾಗಿ ಹೋರಾಟ ನಡೆಸುವವರ ಹೋರಾಟವನ್ನು ಹತ್ತಿಕ್ಕುತ್ತಿರುವುದು ಜನವಿರೋಧಿ ಕ್ರಮವಾಗಿದೆ. ಕನ್ನಡ ಬಳಕೆಯ ಅನುಷ್ಠಾನದ ಹೊಣೆ ಹೊತ್ತಿರುವ ಸರ್ಕಾರಿ ಸಂಸ್ಥೆಗಳು ನಿಷ್ಕ್ರಿಯಗೊಂಡಿವೆ. ಆ ಸಂಸ್ಥೆಗಳು ದಕ್ಷತೆಯಿಂದ ಕೆಲಸ ಮಾಡುವುದನ್ನು ಖಾತ್ರಿಪಡಿಸುವ ಬದಲು ಸರ್ಕಾರವು ಪ್ರತಿಭಟನೆಗಳನ್ನು ಹತ್ತಿಕ್ಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬಂಧಿತ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡಲು ಹಾಗೂ ಅವರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣಗಳನ್ನು ವಾಪಸ್ ಪಡೆಯಲು ಸಿಎಂ ಕೂಡಲೇ ಕ್ರಮಕೈಗೊಳ್ಳಬೇಕು. ಎಲ್ಲ ಸಂಘಗಳ ಮುಖಂಡರ ಸಭೆ ಕರೆದು ಚರ್ಚಿಸಬೇಕು ಎಂದು ಒತ್ತಾಯಿಸಿದರು.

SCROLL FOR NEXT