ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಬುದ್ಧಿಮಾಂದ್ಯ ಮಗಳ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ, ಆರೋಪಿ ಬಂಧನ

ಬೆಳಗಾವಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭವತಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಳಗಾವಿ: ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಬುದ್ಧಿಮಾಂದ್ಯ ಮಗಳ ಮೇಲೆಯೇ ನಿರಂತರ ಅತ್ಯಾಚಾರ ಎಸಗಿದ್ದು, ಆಕೆ ಗರ್ಭವತಿಯಾಗಿರುವ ಆಘಾತಕಾರಿ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಸಂತ್ರಸ್ತೆ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ತಾಯಿ ಕೆಲ ವರ್ಷಗಳ ಹಿಂದೆಯೇ ಮೃತಪಟ್ಟಿದ್ದರಿಂದ, ಮನೆಯಲ್ಲಿ ತಂದೆ ಮತ್ತು ಮಗಳು ಮಾತ್ರ ಇರುತ್ತಿದ್ದರು. ಇಂತಹ ಪರಿಸ್ಥಿತಿಯ ಲಾಭ ಪಡೆದು ಆರೋಪಿ ಮಗಳ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾನೆ.

ಸಂತ್ರಸ್ತೆ ಗರ್ಭಿಣಿಯಾಗಿರುವ ಬಗ್ಗೆ ಅನುಮಾನಗೊಂಡ ಸ್ಥಳೀಯರು ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿದ್ದಾರೆ. ಸಂತ್ರಸ್ತೆ ಗರ್ಭಿಣಿ ಎಂದು ಆಶಾ ಕಾರ್ಯಕರ್ತೆಯರು ಖಚಿತಪಡಿಸಿದಾಗ, ಪೊಲೀಸರಿಗೆ ದೂರು ನೀಡಲಾಗಿದೆ.

ಅನುಮಾನ ಬಂದ ಹಿನ್ನೆಲೆಯಲ್ಲಿ ಡಿಎನ್‌ಎ ಪರೀಕ್ಷೆ ನಡೆಸಲಾಗಿದ್ದು, ಆರೋಪಿಯೇ ತನ್ನ ಮೊಮ್ಮಗನ ತಂದೆ ಎಂಬುದು ದೃಢಪಟ್ಟಿದೆ.

ಎನ್‌ಜಿಒ ದೂರಿನ ಮೇರೆಗೆ ತನಿಖೆ ನಡೆಸಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಎಸ್ಎಸ್ ಸಿದ್ದರಾಮಪ್ಪ ತಿಳಿಸಿದ್ದಾರೆ. 

ಆಕೆಯ ತಂದೆಯೇ ಅಪರಾಧಿ ಎಂದು ತನಿಖೆಯಿಂದ ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ