ಶಾಲಾ ವಾಹನ (ಪ್ರಾತಿನಿಧಿಕ ಚಿತ್ರ) 
ರಾಜ್ಯ

ಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಕಡ್ಡಾಯ

ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್‌ಟಿಎಸ್) ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ. 

ಬೆಂಗಳೂರು: ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್‌ಟಿಎಸ್) ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ. 

ಶಾಲಾ ವಾಹನಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಪೊಲೀಸರಿಂದ ಪಡೆದ ಪ್ರಮಾಣಪತ್ರಗಳನ್ನು ಪಡೆಯುವಂತೆ ಶಾಲಾ ಆಡಳಿತ ಮಂಡಳಿಗಳಿಗೆ ಇಲಾಖೆಯ ಆಯುಕ್ತರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಎರಡು ವರ್ಷಗಳಿಗೊಮ್ಮೆ ಈ ಪ್ರಮಾಣಪತ್ರಗಳನ್ನು ನವೀಕರಿಸಬೇಕು. 'ನಾವು ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಸುತ್ತೋಲೆ ಹೊರಡಿಸಿದ್ದೇವೆ. ಇದರ ಜೊತೆಗೆ ಶಾಲಾ ವಾಹನಗಳಿಗೆ ಮಹಿಳಾ ಸಹಾಯಕಿಯರನ್ನೇ ನೇಮಿಸಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶಾಲಾ ವಾಹನಗಳನ್ನು ನಿರ್ವಹಿಸುವ ಚಾಲಕರು ಮತ್ತು ಸಹಾಯಕರು ಬೆಳಗ್ಗೆ ಮಕ್ಕಳನ್ನು ಶಾಲೆಗೆ ಕರೆತಂದಾಗ ಮತ್ತು ಮಕ್ಕಳನ್ನು ಮನೆಗಳಿಗೆ ಬಿಟ್ಟ ನಂತರ ಶಾಲೆಗೆ ವಾಪಸ್ ಬಂದು, ಶಾಲಾ ಮುಖ್ಯಸ್ಥರ ಸಮ್ಮುಖದಲ್ಲಿಯೇ ಹಾಜರಾತಿ ಪುಸ್ತಕಕ್ಕೆ ಕಡ್ಡಾಯವಾಗಿ ಸಹಿ ಹಾಕಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ಸಾರಿಗೆ ಸೇವೆಗಳಿಗಾಗಿ ಶಾಲೆಗಳು ಸುರಕ್ಷತಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿವೆಯೇ ಎಂಬುದನ್ನು ಪರಿಶೀಲಿಸುವುದು ಆಯಾ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಜವಾಬ್ದಾರಿಯಾಗಿದ್ದು, ಶಾಲೆಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಖಾತ್ರಿಪಡಿಸಬೇಕು. ಶಾಲಾ ಆಡಳಿತ ಮಂಡಳಿಗಳು ವಿವರಗಳನ್ನು ಪ್ರತಿ ವರ್ಷ ಬಿಇಒಗಳಿಗೆ ನೀಡಬೇಕು ಎಂದು ಸೂಚಿಸಿದೆ.

ಎಲ್ಲಾ ಶಾಲಾ ವಾಹನಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವುದು ಮತ್ತು 2012ರಲ್ಲಿ ತಿದ್ದುಪಡಿ ಮಾಡಿದ ಕರ್ನಾಟಕ ಮೋಟಾರು ವಾಹನ ಕಾಯ್ದೆ 1989ರ ಅಡಿಯಲ್ಲಿ ಪ್ರತಿ ವಾಹನಕ್ಕೆ ನಿರ್ದಿಷ್ಟಪಡಿಸಿದ ಮಕ್ಕಳನ್ನಷ್ಟೇ ನಿರ್ಬಂಧಿಸುವುದು ಸೇರಿವೆ.
ಈ ಕ್ರಮವನ್ನು ಸ್ವಾಗತಿಸಿದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ರಾಜ್ಯ ಸರ್ಕಾರವು ಉಚಿತವಾಗಿ ಸನ್ನಡತೆಯ ಪ್ರಮಾಣಪತ್ರವನ್ನು ನೀಡಬೇಕೆಂದು ಒತ್ತಾಯಿಸಿದರು. 

'ಖಾಸಗಿ ಶಾಲೆಗಳಲ್ಲಿ, ಚಾಲಕರು ಆಗ್ಗಾಗ್ಗೆ ಕೆಲಸ ಬಿಡುತ್ತಿರುತ್ತಾರೆ. ಕೆಲವೊಮ್ಮೆ ಎರಡು ತಿಂಗಳಿಗಿಂತ ಹೆಚ್ಚು ಕಾಲ ಕೆಲಸದಲ್ಲಿರುವುದಿಲ್ಲ. ಹೀಗಾಗಿ, ಪ್ರತಿಬಾರಿಯೂ ಪ್ರಮಾಣಪತ್ರಗಳನ್ನು ಪಡೆಯುವುದು ಸಂಸ್ಥೆಗಳಿಗೆ ಹೊರೆಯಾಗುತ್ತದೆ. ಹೀಗಾಗಿ, ಇದನ್ನು ಉಚಿತವಾಗಿ ನೀಡುವಂತೆ ನಾವು ಸರ್ಕಾರವನ್ನು ಕೋರುತ್ತೇವೆ ಎಂದು ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿ ಡಿ ಶಶಿಕುಮಾರ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT