ಜಗದೀಶ್ ಶೆಟ್ಟರ್ 
ರಾಜ್ಯ

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಪ್ರಹ್ಲಾದ್ ಜೋಶಿ ಕೈವಾಡ: ಜಗದೀಶ್ ಶೆಟ್ಟರ್

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

ಹುಬ್ಬಳ್ಳಿ: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಹಿಂದೆ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಶುಕ್ರವಾರ ಆರೋಪಿಸಿದ್ದಾರೆ.

''ರಾಜ್ಯದಲ್ಲಿ ಬಿಜೆಪಿ 7ರಿಂದ 8 ವರ್ಷಗಳ ಕಾಲ ಅಧಿಕಾರದಲ್ಲಿತ್ತು ಮತ್ತು ಪ್ರತಿಪಕ್ಷ ನಾಯಕ ಆರ್ ಅಶೋಕ್ 5 ವರ್ಷ ಗೃಹ ಸಚಿವರಾಗಿದ್ದರು. ಆದರೂ ಈ ಕರಸೇವಕನ ವಿರುದ್ಧದ ಕೇಸ್‌ಗಳನ್ನು ಏಕೆ ವಾಪಸ್ ತೆಗೆದುಕೊಳ್ಳಲಿಲ್ಲ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಗಾಗಿ ಬಿಜೆಪಿ ಕರಸೇವಕನ ಬಗ್ಗೆ ಇಷ್ಟೆಲ್ಲಾ ವಿವಾದ ಮಾಡುತ್ತಿದೆ. ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಪಾತ್ರವಿದೆ. ಪೂಜಾರಿ ಬಂಧನದ ಹಿಂದೆ ಅವರ ಕೈವಾಡವಿದೆ ಎಂದು ಶೆಟ್ಟರ್ ಹುಬ್ಬಳ್ಳಿಯಲ್ಲಿ ಹೇಳಿದ್ದಾರೆ.

ಬಿಜೆಪಿ ಈಗ ಏಕೆ ಪ್ರತಿಭಟನೆ ನಡೆಸುತ್ತಿದೆ ಎಂದು ಪ್ರಶ್ನಿಸಿದ ಅವರು, ಅಧಿಕಾರದಲ್ಲಿದ್ದಾಗ ಈ ಪ್ರಕರಣಗಳನ್ನು ಹಿಂಪಡೆಯಲು ಯಾವುದೇ ಪ್ರಯತ್ನ ಮಾಡಲಿಲ್ಲ. ನಾನೂ ಹತ್ತು ತಿಂಗಳು ರಾಜ್ಯದ ಮುಖ್ಯಮಂತ್ರಿಯಾಗಿದ್ದೆ. ಕರಸೇವಕನಿಗೆ ಸಹಾಯ ಮಾಡುವ ನನ್ನ ಪ್ರಯತ್ನ ದಾಖಲೆಗಳಲ್ಲಿದೆ ಎಂದಿದ್ದಾರೆ.

ಕೇವಲ ಹಿಂದೂ ಮತಗಳನ್ನು ಪಡೆಯಲು ಬಿಜೆಪಿ ಇದೆಲ್ಲವನ್ನೂ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

'ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದಗೌಡ ಮತ್ತು ಬಸವರಾಜ ಬೊಮ್ಮಾಯಿ ಇಷ್ಟು ದಿನ ಮೌನ ವಹಿಸಿದ್ದು ಏಕೆ? ಶ್ರೀಕಾತ್ ಪೂಜಾರಿ ಬಂಧನದ ನಂತರವೇ ಬಿಜೆಪಿಗೆ ಕರಸೇವಕನ ನೆನಪಾಯಿತು. ಕರಸೇವಕ ಬಂಧನದ ವಿಚಾರದಲ್ಲಿ ಬಿಜೆಪಿ ನಾಯಕರು ಬೂಟಾಟಿಕೆ ಮಾಡುತ್ತಿದ್ದಾರೆ. ಅವರಿಗೆ ರಾಮಭಕ್ತರ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಶೆಟ್ಟರ್ ಹೇಳಿದ್ದಾರೆ.

ಸರಕಾರದ ನಿರ್ದೇಶನದಂತೆ ಕರಸೇವಕನನ್ನು ಬಂಧಿಸಿಲ್ಲ ಎಂದರು.

ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸುವುದು ಬಿಜೆಪಿಯ ಉದ್ದೇಶವಾಗಿದೆ. 10ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಿರುವ ಮಣಿಕಾಂತ್ ರಾಥೋಡ್‌ಗೆ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಟಿಕೆಟ್ ನೀಡಿತ್ತು. ಭಾವನೆಗಳನ್ನು ಕೆರಳಿಸಿದರೂ ಬಿಜೆಪಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT