ಬೆಂಗಳೂರು: ಕನ್ನಡ ನಾಮಫಲಕಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಾಗಿಗರುವ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಅಧ್ಯಕ್ಷ ನಾರಾಯಣ ಗೌಡ ಅವರಿಗೆ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ನಾರಾಯಣ ಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ದೇವನಹಳ್ಳಿಯ 5ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್, ಕಳೆದ ಮಂಗಳವಾರ ತೀರ್ಪು ಕಾಯ್ದಿರಿಸಿತ್ತು. ಇಂದು ಕರವೇ ಅಧ್ಯಕ್ಷರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಇದನ್ನು ಓದಿ: ನಾರಾಯಣ ಗೌಡ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಕೋರ್ಟ್, ಕರವೇ ಅಧ್ಯಕ್ಷರಿಗೆ ಇನ್ನೂ 4 ದಿನ ಜೈಲು ಫಿಕ್ಸ್
ಡಿಸೆಂಬರ್ 27ರಂದು(ಬುಧವಾರ) ಬೆಂಗಳೂರಿನಲ್ಲಿ ಕನ್ನಡ ನಾಮಫಲಕ ಅಳವಡಿಕೆಗೆ ಆಗ್ರಹಿಸಿ ನಡೆಸಲಾದ ಪ್ರತಿಭಟನೆಗೆ ಸಂಬಂಧಿಸಿದಂತೆ ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿದಂತೆ 29 ಜನರನ್ನು ಬಂಧಿಸಲಾಗಿದ್ದು, ಎಲ್ಲರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.