ಸಂಗ್ರಹ ಚಿತ್ರ 
ರಾಜ್ಯ

ಶಕ್ತಿ ಯೋಜನೆ ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ಮನವಿ: 2 ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.

ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಆಪರೇಟರ್ ಶರತ್‌ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣ ಕುಮಾರ್ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರು ಸಲ್ಲಿಸಿರುವ ಮನವಿಯನ್ನು ಎರಡು ತಿಂಗಳೊಳಗೆ ಕಾನೂನು ರೀತ್ಯಾ ಪರಿಶೀಲಿಸಲು ಸರ್ಕಾರಕ್ಕೆ ನಿರ್ದೇಶನ ನೀಡಿ ಅರ್ಜಿಯನ್ನು ಇತ್ಯರ್ಥಪಡಿಸಿ ನ್ಯಾಯಾಲಯ ಆದೇಶಿಸಿತು. ಅರ್ಜಿದಾರರ ಪರ ಹಿರಿಯ ವಕೀಲ ಪುತ್ತಿಗೆ ರಮೇಶ್ ವಾದಿಸಿದರು.

ರಾಜ್ಯದಲ್ಲಿ ಖಾಸಗಿ ಬಸ್‌ಗಳ ಸಂಚಾರಕ್ಕೆ 65 ವರ್ಷಗಳ ಇತಿಹಾಸವಿದೆ. ಸುಮಾರು 16 ಜಿಲ್ಲೆಗಳಲ್ಲಿ 9 ಸಾವಿರಕ್ಕೂ ಅಧಿಕ ಖಾಸಗಿ ಬಸ್‌ಗಳು ಸೇವೆ ಒದಗಿಸುತ್ತಿವೆ. ರಾಜ್ಯದಲ್ಲಿ 75 ಸಾವಿರ ಕಾರ್ಮಿಕರು ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಅಲ್ಲದೇ ಖಾಸಗಿ ಬಸ್ ಆಪರೇಟರ್‌ಗಳು ಅತಿ ಹೆಚ್ಚು ತೆರಿಗೆ ಪಾವತಿದಾರರಾಗಿದ್ದು, ವಾರ್ಷಿಕ 1,620 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಶಕ್ತಿ ಯೋಜನೆ ಜಾರಿಗೆ ಬಂದ ದಿನದಿಂದ ಖಾಸಗಿ ಬಸ್ ಆಪರೇಟರ್‌ಗಳ ಸಂಕಷ್ಟ ಪ್ರಾರಂಭವಾಗಿದೆ.

ಹೀಗಾಗಿ, ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ಅನ್ವಯ ಮಾಡಬೇಕು. ಸರ್ಕಾರಿ ಬಸ್‌ಗಳಂತೆ ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರ ಪ್ರಯಾಣ ವೆಚ್ಚವನ್ನು ಸರ್ಕಾರ ಖಾಸಗಿ ಬಸ್ ಆಪರೇಟರ್‌ಗಳಿಗೆ ಮರು ಪಾವತಿ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಾರಿಗೆ ಇಲಾಖೆಗೆ 2023ರ ಜುಲೈ 26ರಂದು ಸಲ್ಲಿಸಿರುವ ಮನವಿಯನ್ನು ಪರಿಗಣಿಸಲು ಆದೇಶ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ

4 ಜನರಿಗೆ ಒಂದೇ ಟಿಕೆಟ್! ಸಾರಿಗೆ ಇಲಾಖೆಯಲ್ಲಿ ಡೀಸೆಲ್ ಬೆನ್ನಲ್ಲೇ ಟಿಕೆಟ್ ರೋಲ್ ಕೊರತೆ