ಸಂಗ್ರಹ ಚಿತ್ರ 
ರಾಜ್ಯ

ಮಾಲ್ ಆಫ್ ಏಷ್ಯಾ ಪ್ರಕರಣ: ಸಂಚಾರ ಸಮಸ್ಯೆ ಪರಿಹಾರಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಹೈಕೋರ್ಟ್‌ಗೆ ಪೊಲೀಸರ ಮಾಹಿತಿ

ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್‌ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.

ಬೆಂಗಳೂರು: ಫೀನಿಕ್ಸ್ ಮಾಲ್ ಆಫ್ ಏಷ್ಯಾಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು, ಮುಖ್ಯವಾಗಿ ಸಂಚಾರ ದಟ್ಟಣೆ ಮತ್ತು ಶಬ್ದ ಮಾಲಿನ್ಯವನ್ನು ಪರಿಹರಿಸಲು ನಡೆಸಿದ ಚರ್ಚೆ ಕುರಿತ ಮಾಹಿತಿಯನ್ನು ಹೈಕೋರ್ಟ್‌ಗೆ ನಗರ ಪೊಲೀಸರು ಶುಕ್ರವಾರ ನೀಡಿದರು.

ಡಿಸೆಂಬರ್‌ 31ರಿಂದ ಜನವರಿ 15ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಪೊಲೀಸ್ ಆಯುಕ್ತರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ದ್ವಿಚಕ್ರ ವಾಹನಗಳ ಪ್ರವೇಶ ಶುಲ್ಕ ಕಡಿತಗೊಳಿಸಲು ಸೂಚಿಸಲಾಗಿದೆ. ಕ್ಯಾಬ್, ಆಟೋಗಳ ಪಿಕಪ್, ಡ್ರಾಪ್ ಪಾಯಿಂಟ್ ಬದಲಾವಣೆ ಮಾಡಲಾಗಿದೆ. ಮಾಲ್‌ನ ಉದ್ಯೋಗಿಗಳ ವಾಹನ ಪಾರ್ಕಿಂಗ್‌ಗೆ ರಿಯಾಯಿತಿ ಪಾಸ್ ವ್ಯವಸ್ಥೆ ಮಾಡಲಾಗಿದೆ. ವಾಹನಗಳ ಭದ್ರತಾ ಪರಿಶೀಲನಾ ಪಾಯಿಂಟ್ ಬದಲಾವಣೆ ಮಾಡಿ ಪ್ರೀಪೇಯ್ಡ್ ಆಟೋ ನಿಲ್ದಾಣ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಈ ವೇಳೆ ನ್ಯಾಯಾಲಯವು ಪರಿಹಾರ ಕ್ರಮಗಳ ಜಾರಿ ಬಗ್ಗೆ ಜನವರಿ 30ಕ್ಕೆ ವಿವರವಾದ ವರದಿ ಸಲ್ಲಿಸಲು ಸೂಚಿಸಿ ವಿಚಾರಣೆಯನ್ನು ಮುಂದೂಡಿತು. ಅಲ್ಲದೇ, ಅಲ್ಲಿಯವರೆಗೆ ಮಾಲ್ ಆಫ್ ಏಷ್ಯಾ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ನಗರ ಪೊಲೀಸ್ ಆಯುಕ್ತರಿಗೆ ನೀಡಿದ್ದ ನಿರ್ದೇಶನವನ್ನು ಹೈಕೋರ್ಟ್ ವಿಸ್ತರಿಸಿತು.

ಕಳೆದ ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು “ನ್ಯಾಯಾಲಯದ ಸೂಚನೆಯಂತೆ ಮಾಲ್ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆದಿದೆ. ಮಾಲ್ ಪ್ರತಿನಿಧಿಗಳು ಪೊಲೀಸ್ ಆಯುಕ್ತರೊಂದಿಗೆ ಚರ್ಚಿಸಿದ್ದಾರೆ. ಪೊಲೀಸ್ ಆಯುಕ್ತರು ಮಾಲ್‌ಗೆ ಭೇಟಿ ನೀಡಿ, ಶಬ್ದ ಮಾಲಿನ್ಯ, ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪರಿಶೀಲನೆ ನಡೆಸಿದ್ದಾರೆ” ಎಂದು ವಿವರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ