ಸಿಎಂ ಸಿದ್ದರಾಮಯ್ಯ 
ರಾಜ್ಯ

ಅತಿಥಿ ಉಪನ್ಯಾಸಕರಿಗೆ 8ಸಾವಿರ ರು. ಗೌರವಧನ  ಹೆಚ್ಚಳಕ್ಕೆ ಸಿಎಂ ಸಮ್ಮತಿ: ತಿಂಗಳಿಂದ ನಡೆಯುತ್ತಿದ್ದ ಮುಷ್ಕರ ವಾಪಸ್

ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದು, ಸೋಮವಾರದಿಂದ ತರಗತಿಗಳಿಗೆ ಮರಳುವ ಸಾಧ್ಯತೆಯಿದೆ. ಕಾನೂನಾತ್ಮಕ ತೊಡಕುಗಳಿಂದಾಗಿ ಸೇವೆಗಳನ್ನು ಕಾಯಂಗೊಳಿಸುವುದನ್ನು ಹೊರತುಪಡಿಸಿ, ಮಾನವೀಯ ಆಧಾರದ ಮೇಲೆ ಅವರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬೆಂಗಳೂರು : ಗೌರವಧನವನ್ನು5 ರಿಂದ 8 ಸಾವಿರ ರೂ.ಗೆ ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ತಮ್ಮ ಧರಣಿಯನ್ನು ಹಿಂಪಡೆದಿದ್ದಾರೆ, ಜೊತೆಗೆ ವೇತನ ಸಹಿತ ಹೆರಿಗೆ ರಜೆ ಸೇರಿದಂತೆ ಇತರೆ ಸೌಲಭ್ಯಗಳನ್ನು ಮೂರು ತಿಂಗಳವರೆಗೆ ವಿಸ್ತರಿಸಲಪ ಸಮ್ಮತಿ ನೀಡಲಾಗಿದೆ.

ಕರ್ತವ್ಯಕ್ಕೆ ಹಾಜರಾಗುವಂತೆ ಮನವಿ ಮಾಡಿದ್ದು, ಸೋಮವಾರದಿಂದ ತರಗತಿಗಳಿಗೆ ಮರಳುವ ಸಾಧ್ಯತೆಯಿದೆ. ಕಾನೂನಾತ್ಮಕ ತೊಡಕುಗಳಿಂದಾಗಿ ಸೇವೆಗಳನ್ನು ಕಾಯಂಗೊಳಿಸುವುದನ್ನು ಹೊರತುಪಡಿಸಿ, ಮಾನವೀಯ ಆಧಾರದ ಮೇಲೆ ಅವರ ಹೆಚ್ಚಿನ ಬೇಡಿಕೆಗಳನ್ನು ಈಡೇರಿಸಬಹುದು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಐದು ವರ್ಷಕ್ಕಿಂತ ಕಡಿಮೆ ಕೆಲಸದ ಅನುಭವ ಹೊಂದಿರುವ ಉಪನ್ಯಾಸಕರಿಗೆ 5,000 ರೂ., 5-10 ವರ್ಷಗಳ ಅನುಭವ ಹೊಂದಿರುವವರಿಗೆ 6,000 ರೂ. 10-15 ವರ್ಷ ಸೇವೆ ಸಲ್ಲಿಸಿದವರಿಗೆ 7 ಸಾವಿರ ಹಾಗೂ 15 ವರ್ಷ ಮೇಲ್ಪಟ್ಟವರಿಗೆ 8 ಸಾವಿರ ರೂ. ಏರಿಕೆಯಾಗಲಿದೆ ಎಂದರು.

ಇದಲ್ಲದೆ, ಅವರು ವಾರ್ಷಿಕವಾಗಿ 5 ಲಕ್ಷ ರೂಪಾಯಿಗಳ ಆರೋಗ್ಯ ವಿಮೆಯನ್ನು ಪಡೆಯುತ್ತಾರೆ ಮತ್ತು 60 ವರ್ಷಗಳ ನಂತರ 5 ಲಕ್ಷ ರೂಪಾಯಿಗಳ ಗ್ರಾಚ್ಯುಟಿಯನ್ನು ಪಡೆಯುತ್ತಾರೆ. ವಾರಕ್ಕೆ 15 ಗಂಟೆಗಿಂತ ಹೆಚ್ಚಿನ ಕೆಲಸದ ಹೊರೆ ಇರುವ ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆ, ಮೂರು ತಿಂಗಳ ವೇತನ ಸಹಿತ ಹೆರಿಗೆ ರಜೆ ನೀಡಲು ಸಿಎಂ ಒಪ್ಪಿಗೆ ಸೂಚಿಸಿದರು.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಕಳೆದ ಶುಕ್ರವಾರ ಅತಿಥಿ ಉಪನ್ಯಾಸಕರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, 5,000 ರೂ.ಗಳ ವೇತನ ಹೆಚ್ಚಳ ಸೇರಿದಂತೆ ಕೆಲವು  ಸೌಲಭ್ಯಗಳನ್ನು ಘೋಷಿಸಿದ್ದರು. ಆದರೆ ಅದಕ್ಕೆ ಒಪ್ಪದ ಅತಿಥಿ ಉಪನ್ಯಾಸಕರು  ಜನವರಿ 1ರಂದು ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಿಸಿ, ಜನವರಿ 4ರಂದು ಫ್ರೀಡಂ ಪಾರ್ಕ್‌ನಲ್ಲಿ ರ್ಯಾಲಿ ನಡೆಸಿದರು.

ಈ ನಡುವೆ ಶುಕ್ರವಾರ ಮಾಜಿ ಎಂಎಲ್‌ಸಿ ಪುಟ್ಟಣ್ಣ ಅವರನ್ನು ಭೇಟಿ ಮಾಡಿ ಸಿಎಂ ಜತೆ ಸಭೆ ನಡೆಸುವಲ್ಲಿ  ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅತಿಥಿ ಉಪನ್ಯಾಸಕರ ಸಂಘದ ಪ್ರತಿನಿಧಿಗಳಲ್ಲದೆ, ಸುಧಾಕರ್, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಉನ್ನತ ಶಿಕ್ಷಣ ಇಲಾಖೆ ಕಾರ್ಯದರ್ಶಿ ಎಂ.ಎಸ್.ಶ್ರೀಕರ್, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಜಿ.ಜಗದೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

SCROLL FOR NEXT