ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಚಿತ್ರಕಲಾ ಪರಿಷತ್ ಆಯೋಜಿಸಿರುವ 'ಚಿತ್ರಸಂತೆ'ಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ವಿವಿಧ ಕಲಾಕೃತಿಗಳನ್ನು ವೀಕ್ಷಿಸಿದರು. ಅವರ ಚಿತ್ರವನ್ನು ಕಾಣಿಕೆಯಾಗಿ ನೀಡಲಾಯಿತು 
ರಾಜ್ಯ

ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಅನುದಾನ, ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ,ಆರ್ಟ್ ಗ್ಯಾಲರಿ ಸ್ಥಾಪನೆ: 21ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರಕಲೆ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರು: ಚಿತ್ರಕಲೆ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿರುವ ಚಿತ್ರಕಲಾ ಪರಿಷತ್ ನಲ್ಲಿ 21ನೇ ಚಿತ್ರಸಂತೆ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಮತ್ತು ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು.

ಚಿತ್ರಸಂತೆ 2003ರಲ್ಲಿ ಆರಂಭವಾಗಿದೆ. ಇಂದಿಗೆ 21 ವರ್ಷ ಹಿಡಿದಿದೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗಲೂ ಚಿತ್ರಸಂತೆ ಉದ್ಘಾಟಿಸಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿಕೊಂಡರು.

22 ರಾಜ್ಯಗಳಿಂದ 1600ಕ್ಕೂ ಹೆಚ್ಚು ಕಲಾವಿದರು: ಚಿತ್ರಸಂತೆಯಲ್ಲಿ ಪ್ರತಿವರ್ಷ ಲಕ್ಷಾಂತರ ಮಂದಿ ವೀಕ್ಷಕರು, ಸಾವಿರಾರು ಕಲಾವಿದರು ಭಾಗವಹಿಸುತ್ತಾರೆ. ಈ ವರ್ಷ 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಂಡಿರುವುದು ಸಂತಸದ ವಿಷಯ. ಈ ಬಾರಿಯ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಿಸಲಾಗುತ್ತಿದ್ದು ವಿಶೇಷ ಗೌರವ ಸೂಚಿಸಿದಂತಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಚಿವರಾದ ಹೆಚ್ ಕೆ ಪಾಟೀಲ್, ಸುಧಾಕರ್, ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ ಎಲ್ ಶಂಕರ್, ಉಪಾಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

ನನ್ನ ಜೊತೆ ಮರ್ಯಾದೆಯಿಂದ ಮಾತಾಡು: ಸ್ವಿಟ್ಜರ್ಲೆಂಡ್ ವಿರುದ್ಧದ ಪಂದ್ಯದ ನಡುವೆ ರೆಫರಿ ವಿರುದ್ಧ ಮೆಸ್ಸಿ ವಾಗ್ವಾದ, Video

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video