ರಾಜ್ಯ

ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಅವರ ಫೇಸ್‌ಬುಕ್ ಪೇಜ್ ನಿರ್ವಾಹಕರ ವಿರುದ್ಧ ದೂರು ದಾಖಲು

Ramyashree GN

ಬೆಂಗಳೂರು: ಬಿಜೆಪಿ ನಾಯಕರ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡು ತಿರುಚಿದ ಮತ್ತು ಅವಹೇಳನಕಾರಿ ರೀತಿಯಲ್ಲಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಫೇಸ್‌ಬುಕ್ ಖಾತೆಯ ನಿರ್ವಾಹಕರ ವಿರುದ್ಧ ಪೊಲೀಸರಿಗೆ ದೂರು ದಾಖಲಿಸಲಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಚಿವ ಕೆಎಸ್ ಈಶ್ವರಪ್ಪ, ಸಿಟಿ ರವಿ, ಸುನೀಲ್ ಕುಮಾರ್, ಸಂಸದ ಪ್ರತಾಪ್ ಸಿಂಹ ಅವರನ್ನು ಗುರಿಯಾಗಿಸಿಕೊಂಡು ದೋಷಪೂರಿತ ಪೋಸ್ಟ್‌ಗಳನ್ನು ಮಾಡಲಾಗಿದೆ ಎಂದು ಬಿಜೆಪಿ ಕಾನೂನು ಘಟಕದ ರಾಜ್ಯ ಸಂಯೋಜಕ ಯೋಗೇಂದ್ರ ಹೊಡಘಟ್ಟ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಂಗ್ರೆಸ್‌ನ ಅಧಿಕೃತ ಫೇಸ್‌ಬುಕ್ ಖಾತೆಯಲ್ಲಿ ಬಿಜೆಪಿಯ ಹಿರಿಯ ನಾಯಕರ ತಿರುಚಿದ ಚಿತ್ರಗಳೊಂದಿಗೆ ಸುಳ್ಳು ವಿಷಯವನ್ನು ಪೋಸ್ಟ್ ಮಾಡಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಈ ಕ್ರಮಗಳು ಕರ್ನಾಟಕದ ಜನರ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಯತ್ನಿಸುತ್ತಿವೆ ಮತ್ತು ಬಿಜೆಪಿ ನಾಯಕರ ಪ್ರತಿಷ್ಠೆಗೆ ಮಸಿ ಬಳಿಯುತ್ತಿವೆ ಎಂದು ಆರೋಪಿಸಲಾಗಿದೆ.

ಇಂತಹ ಪೋಸ್ಟ್‌ಗಳು ಘರ್ಷಣೆಯನ್ನು ಪ್ರಚೋದಿಸುವ ಮತ್ತು ಸಮಾಜದ ಕೆಲವು ವರ್ಗಗಳನ್ನು ಅಸ್ಥಿರಗೊಳಿಸುವ ಗುರಿಯನ್ನು ಹೊಂದಿವೆ ಎಂದು ಆರೋಪಿಸಲಾಗಿದೆ.

ಯೋಗೇಂದ್ರ ಹೊಡಘಟ್ಟ ದೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಫೇಸ್‌ಬುಕ್ ಪುಟವನ್ನು ನಿರ್ವಹಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

SCROLL FOR NEXT