ಲಕ್ಷ್ಮಿ ಹೆಬ್ಬಾಳ್ಕರ್ 
ರಾಜ್ಯ

ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರದಲ್ಲಿತ್ತು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಚರ್ಚೆಗೆ ಗ್ರಾಸ!

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ನಡೆದ 6ನೇ ಕನ್ನಡ ಸಮಾವೇಶದಲ್ಲಿ ಭಾಗಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜ. 07ರಂದು ನಡೆದ 6ನೇ ಕನ್ನಡ ಸಮಾವೇಶದಲ್ಲಿ ಭಾಗಿಯಾಗಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಹೇಳಿಕೆ ನೀಡಿದ್ದು, ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಕನ್ನಡ ಭಾಷೆ ಹಲವು ವರ್ಷಗಳ ಇತಿಹಾಸ ಹೊಂದಿದೆ. ನಮ್ಮ ಸಾಹಿತಿಗಳು ಇದನ್ನು ಸಾಬೀತು ಮಾಡಿದ್ದಾರೆ. ನಮ್ಮ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತ್ರಿಗಳು ಲಭಿಸಿರೋದು ನಮ್ಮ ಹೆಮ್ಮೆ. ನಮ್ಮ ಕನ್ನಡ ಭಾಷೆ ಕಲೆ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತವಾಗಿದೆ. ಇಂತಹ ನಾಡಿನಲ್ಲಿ ಜನಿಸಲು ನಾವು ಪುಣ್ಯ ಮಾಡಿರಬೇಕು. ಆದ್ರೆ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಭಾಷಣದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತುಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಳಗಾವಿ ವಿಶಾಲ ಕರ್ನಾಟಕಕ್ಕೆ ಸೇರಿ ಅನೇಕ ವರ್ಷಗಳಾಗಿದೆ. ವೋಟಿನ ರಾಜಕಾರಣಕ್ಕೆ‌ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿರುವುದು ವಿಷಾದಕರ. ಕಾಶ್ಮೀರ ಕೂಡ ಪಾಕಿಸ್ತಾನಕ್ಕೆ ಸೇರಿದ್ದು ಅಂತ ಕಾಂಗ್ರೆಸ್‌ನವರು ಹೇಳುತ್ತಾರೆ. ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಸಚಿವ ಸಂಪುಟದಿಂದ ಹೊರಗೆ ಇಡಬೇಕು. ಹೆಬ್ಬಾಳ್ಕರ್ ಆರೂವರೆ ಕೋಟಿ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು. ಹಾಗಾಗಿಯೇ ಬೆಳಗಾವಿ ಅಧಿವೇಶನ ಮಾಡಲಾಗುತ್ತಿದೆ. ಅವರ ಹೇಳಿಕೆ ಬೇರೆಯವರನ್ನು ಕೆರಳಿಸಲಿದೆ ಎಂದು ಬೆಂಗಳೂರಿನಲ್ಲಿ ಶಾಸಕ ಎಸ್.ಆರ್. ವಿಶ್ವನಾಥ್ ಆಕ್ರೋಶ ಹೊರ ಹಾಕಿದರು.

ಶಾಸಕ ಡಾ. ಅಶ್ವಥ್ ನಾರಾಯಣ್ ಮಾತನಾಡಿ, ಕರ್ನಾಟಕ ವಿವಿಧ ರಾಜ್ಯದಲ್ಲಿ ಹಂಚಿ ಹೋಗಿತ್ತು. ಅದಕ್ಕೆ‌ ಕರ್ನಾಟಕ ಏಕೀಕರಣ ಆಗಿದ್ದು. ಇಂತಹ ಸಂದರ್ಭದಲ್ಲಿ ಹಿಂದಕ್ಕೆ‌ ಹೋಗುವ ಅವಶ್ಯಕತೆ ಇರಲಿಲ್ಲ. ಇದು ರಾಜಕೀಯ ಪ್ರೇರಿತ ಹೇಳಿಕೆ. ಈ ಸಂದರ್ಭದಲ್ಲಿ ಅವಶ್ಯಕತೆ ಇರಲಿಲ್ಲ. ಬೆಳಗಾವಿ ಈಗ ಕರ್ನಾಟಕಕ್ಕೆ ಸೇರಿದೆ. ರಾಜಕೀಯ ಪ್ರೇರಿತ ಹುನ್ನಾರ ಆಗಬಾರದು. ಜನರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಆಗಬೇಕು. ಕನ್ನಡಿಗರು ವಿವಿಧ ಸಂಸ್ಕೃತಿಯಲ್ಲಿ ಏಕತೆ ಕಾಣಬೇಕು. ಇವರ ಹೇಳಿಕೆಯನ್ನು ಮರಾಠಿಗರಾಗಲಿ, ಕನ್ನಡಿಗರಾಗಲಿ ಬೆಂಬಲಿಸಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT