ರಾಜ್ಯ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗೆ ಕೇಂದ್ರದಿಂದ 688 ಕೋಟಿ ರೂ ವ್ಯಯ

Srinivas Rao BV

ಬೆಂಗಳೂರು: ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ರಸ್ತೆ ಸುರಕ್ಷತೆಗಾಗಿ ಕೇಂದ್ರ ಸರ್ಕಾರ 688 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲು ನಿರ್ಧರಿಸಿದೆ.

ಇತ್ತೀಚೆಗೆ ಸಮೀಕ್ಷೆ ನಡೆದಿದ್ದು, ಆ ವರದಿಯಲ್ಲಿ ಉಲ್ಲೇಖವಾಗಿರುವ ಅಪಾಯಕಾರಿ ಸ್ಥಳಗಳು, ಪಾದಾಚಾರಿಗಳಿಗೆ ಮೇಲ್ಸೇತುವೆ, ರಸ್ತೆ ಗುರುತುಗಳು, ಗಾರ್ಡ್ ರೈಲ್‍, ಕ್ರ್ಯಾಶ್ ಬ್ಯಾರಿಯರ್ ಗಳನ್ನು ಅವಳವಡಿಸಲು ಕೇಂದ್ರ ಸರ್ಕಾರ ಬಿಡ್ ಕರೆದಿದೆ. 

ಇತ್ತೀಚೆಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ಸಿಎಂ ಸಿದ್ದರಾಮಯ್ಯ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು ಹಾಗೂ ದೋಷಗಳನ್ನು ಸರಿಪಡಿಸಲು ಮನವಿ ಮಾಡಿದ್ದರು.

ಕೇಂದ್ರ ಸರ್ಕಾರದ ಇತ್ತೀಚಿನ ಅಂಕಿ-ಅಂಶಗಳ ಪ್ರಕಾರ ಜುಲೈ 2023 ರ ಅಂತ್ಯದ ವೇಳೆಗೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ 400 ಅಪಘಾತಗಳು ಸಂಭವಿಸಿದ್ದು, 121 ಮಂದಿ ಸಾವನ್ನಪ್ಪಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಪಘಾತದ ಸಂಖ್ಯೆ ಕಡಿಮೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

SCROLL FOR NEXT