U-girder 
ರಾಜ್ಯ

ಬೆಂಗಳೂರು ಸಬರ್ಬನ್ ರೈಲು ಯೋಜನೆಗೆ 31 ಮೀ. ಉದ್ದದ ಯು-ಗರ್ಡರ್ ಸಿದ್ಧ!

ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ.

ಬೆಂಗಳೂರು: ಮಹತ್ವಾಕಾಂಕ್ಷಿ ಬೆಂಗಳೂರು ಸಬರ್ಬನ್ ರೈಲು ಯೋಜನೆಯ ಕಾರಿಡಾರ್-2ರಲ್ಲಿ ಅಳವಡಿಸಲಿರುವ, ದಾಖಲೆಯ 31 ಮೀ. ಉದ್ದದ ಯು-ಗರ್ಡರ್ ಅನ್ನು ದೇವನಹಳ್ಳಿಯಲ್ಲಿರುವ ಕಾಮಗಾರಿ ಸ್ಥಾವರದಲ್ಲಿ (ಕಾಸ್ಟಿಂಗ್ ಯಾರ್ಡ್) ಶನಿವಾರ ರಾತ್ರಿ ಸಿದ್ಧಪಡಿಸಲಾಗಿದೆ.

ದೇಶದ ಉಳಿದ ಮೆಟ್ರೋಗಳಲ್ಲಿ 28 ಮೀ. ಉದ್ದದ ಗರ್ಡರ್ (ಸಿಮೆಂಟ್ ಮತ್ತು ಕಬ್ಬಿಣದ ತೊಲೆ) ತಯಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಬೆಂಗಳೂರು ಸಬರ್ಬನ್ ರೈಲು ಯೋಜನೆಯಲ್ಲಿ ಈ ದಾಖಲೆಯನ್ನು ಮುರಿಯಲಾಗಿದೆ. 'ಯು' ಆಕಾರದಲ್ಲಿರುವ ಇಂತಹ 450 'ಯು-ಗರ್ಡರ್'ಗಳು ಕಾರಿಡಾರ್-2ರಲ್ಲಿ (ಮಲ್ಲಿಗೆ ಲೈನ್) ಅಗತ್ಯವಾಗಿವೆ. ಇದನ್ನು ಯಶವಂತಪುರ-ಹೆಬ್ಬಾಳ ನಡುವಿನ 8 ಕಿ.ಮೀ. ಮಾರ್ಗದಲ್ಲಿ ಸದ್ಯದಲ್ಲೇ ಅಳವಡಿಸಲಾಗುವುದು’ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ.

ಇಂತಹ ಪ್ರತೀ ಒಂದು ಗರ್ಡರ್ ತಯಾರಿಕೆಗೂ ಎಂ60 ಗುಣಮಟ್ಟದ 69.5 ಕ್ಯೂಬಿಕ್ ಮೀಟರ್ ಕಾಂಕ್ರೀಟ್ ಬೇಕಾಗುತ್ತದೆ. ಇಂತಹ ತೊಲೆಗಳು ತಲಾ 178 ಟನ್ ಭಾರವಿರುತ್ತವೆ. ಇವುಗಳಿಂದ ಕಾಮಗಾರಿಗೆ ತಗುಲುವ ಸಮಯ ಸಾಕಷ್ಟು ಉಳಿಯಲಿದೆ. ಇದನ್ನು ಆಸ್ ಸಿಸ್ಟಮ್ ಕಂಪನಿಯು ಬೆಂಗಳೂರು ಸಬರ್ಬನ್ ರೈಲು ಯೋಜನೆಗಾಗಿ ವಿನ್ಯಾಸಗೊಳಿಸಿದ್ದು, ಚೆನ್ನೈನ ಐಐಟಿ ಮತ್ತು ಜನರಲ್ ಕನ್ಸಲ್ಟೆಂಟ್ ಕಂಪನಿಗಳು ಕೂಡ ಇದರಲ್ಲಿ ಸಕ್ರಿಯ ಪಾತ್ರ ವಹಿಸಿ, ಗುಣಮಟ್ಟವನ್ನು ಖಾತ್ರಿಪಡಿಸಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇಂತಹ ಯು-ಗರ್ಡರ್ ಸಿದ್ಧಪಡಿಸಿರುವುದು ಒಂದು ತಾಂತ್ರಿಕ ಅದ್ಭುತವಾಗಿದ್ದು, ಸರಕಾರಿ ಸ್ವಾಮ್ಯದ ಕೆ-ರೈಡ್ ಇದರ ಉಸ್ತುವಾರಿ ಮತ್ತು ಗುಣಮಟ್ಟ ನಿಯಂತ್ರಣಗಳನ್ನು ನೋಡಿಕೊಂಡಿದೆ. ಇಂತಹ ಗರ್ಡರ್ ಅಳವಡಿಸುವುದರಿಂದ ನೇರವಾಗಿ ಹಳಿಗಳನ್ನು ಅಳವಡಿಸಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT