ನಟ ದರ್ಶನ್ ಮತ್ತು ಪಬ್ ನ ಸಂಗ್ರಹ ಚಿತ್ರ 
ರಾಜ್ಯ

ಜೆಟ್ ಲ್ಯಾಗ್ ಪಬ್ ನಲ್ಲಿ ಪಾರ್ಟಿ ಪ್ರಕರಣ: ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿ 8 ಮಂದಿಗೆ ನೊಟೀಸ್!

ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

ಬೆಂಗಳೂರು: ಮಧ್ಯರಾತ್ರಿ ಅವಧಿ ಮೀರಿ ಬೆಳಗಿನ ಜಾವದವರೆಗೆ ಪಬ್ ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಮೇಲೆ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 'ಕಾಟೇರ' ಚಿತ್ರ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡು ಗಳಿಕೆಯಲ್ಲಿ 100 ಕೋಟಿ ಕ್ಲಬ್ ಸೇರಿದೆ. ವಿದೇಶದಲ್ಲಿ ಕೂಡ ಹವಾ ಎಬ್ಬಿಸಿದೆ. ಈ ಖುಷಿಯಲ್ಲಿ ಚಿತ್ರತಂಡ ಜನವರಿ 3ರಂದು ಬೆಂಗಳೂರಿನ ರಾಜಾಜಿನಗರದಲ್ಲಿರುವ ಜೆಟ್ ಲ್ಯಾಗ್ ಪಬ್ ನಲ್ಲಿ ಸಕ್ಸಸ್ ಪಾರ್ಟಿ ಇಟ್ಟುಕೊಂಡಿತ್ತು. ಅದರಲ್ಲಿ ಚಿತ್ರದ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಿರ್ದೇಶಕ ತರುಣ್ ಸುಧೀರ್, ನಾಯಕ ನಟ ದರ್ಶನ್ ಸೇರಿದಂತೆ ಸ್ಯಾಂಡಲ್ ವುಡ್ ನ ಹಲವು ನಟ, ನಟಿಯರು ಭಾಗಿಯಾಗಿದ್ದರು.

ಬಾರ್ ಅಂಡ್ ರೆಸ್ಟೋರೆಂಟ್ ಗೆ ವಿಧಿಸಿರುವ ನಿಯಮ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್ ಬಾಗಿಲು ಹಾಕಬೇಕು. ಆದರೆ ಚಿತ್ರತಂಡ ಮಧ್ಯರಾತ್ರಿ ಮೀರಿ ಬೆಳಗಿನ ಜಾವದವರೆಗೂ ಪಾರ್ಟಿ ಮಾಡಿದ್ದು ಪಾರ್ಟಿ ಮುಗಿಸಿಕೊಂಡು ಹೊರಬರುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ನಾಲ್ವರಿಗೆ ನೊಟೀಸ್: ಪಾರ್ಟಿಯಲ್ಲಿ ಭಾಗಿ ಆದ ನಟ ದರ್ಶನ್, ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್​ಗೆ ಆರಂಭದಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಸುಬ್ರಹ್ಮಣ್ಯನಗರ ಇನ್ಸ್​ಪೆಕ್ಟರ್​ ಸುರೇಶ್ ಅವ​ರಿಂದ ನೋಟಿಸ್ ಜಾರಿ ಆಗಿದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಪಾರ್ಟಿಯಲ್ಲಿ ಭಾಗಿ ಆಗಿದ್ದ ನಟ ಡಾಲಿ ಧನುಂಜಯ್, ನಟ ಚಿಕ್ಕಣ್ಣ, ನಿನಾಸಂ ಸತೀಶ್, ನಿರ್ದೇಶಕ ತರುಣ್ ಸುಧೀರ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಗೆ ಸಹ ನೊಟೀಸ್ ನೀಡಲಾಗಿದೆ. ಸದ್ಯ ಚಿತ್ರತಂಡ ವಿದೇಶ ಪ್ರವಾಸದಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!