ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು 252 ಮಂದಿಗೆ ಕೊರೋನಾ ಪಾಸಿಟಿವ್, ಇಬ್ಬರು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ 252 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,131ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಂಗಳವಾರ 252 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,131ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 252 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಇಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 441 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,359 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 3.42ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 172 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 8, ಹಾಸನ 20, ಧಾರವಾಡ 6 ಪ್ರಕರಣ ಸೇರಿದಂತೆ ಒಟ್ಟು 252 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭೋವಿ' ನಿಗಮದಲ್ಲಿ 'ಕಮಿಷನ್' ಆರೋಪ ಬೆನ್ನಲ್ಲೇ ಮೊದಲ ತಲೆದಂಡ: ಅಧ್ಯಕ್ಷ ಸ್ಥಾನಕ್ಕೆ ಎಸ್. ರವಿಕುಮಾರ್ ರಾಜೀನಾಮೆ

ಬ್ರಹ್ಮೋಸ್, S-400ಗೂ ಠಕ್ಕರ್...? ಚೀನಾ ಸೇನೆ ಬತ್ತಳಿಕೆಯಲ್ಲಿರುವ 5 ಭಯಾನಕ, ವಿಧ್ವಂಸಕ ಶಸ್ತ್ರಾಸ್ತ್ರಗಳು ಇವು!

Dharmasthala ಬುರುಡೆ ಪ್ರಕರಣಕ್ಕೆ ಸ್ಫೋಟಕ ತಿರುವು: 'ಬುರುಡೆ' ಕೊಟ್ಟಿದ್ದು Girish Mattannavar, SIT ಮುಂದೆ ಸತ್ಯ ಬಿಚ್ಚಿಟ್ಟ ದೂರುದಾರ ಜಯಂತ್!

ಕರಾಳ ಚೀನಾಕ್ಕೆ ಭಾರತವನ್ನು ಕಳೆದುಕೊಂಡಂತೆ ಅನಿಸಿದೆ': ಜಗತ್ತಿನ ಗಮನ ಸೆಳೆದ ಡೊನಾಲ್ಡ್ ಟ್ರಂಪ್ ಪೋಸ್ಟ್!

Shreyas Iyer ಟೀಂ ಇಂಡಿಯಾ ಕಮ್ ಬ್ಯಾಕ್ ಕನಸು ಮತ್ತಷ್ಟು ದೂರ; Duleep Trophy Semi-Final ಪಂದ್ಯ..? ಆಗಿದ್ದೇನು?

SCROLL FOR NEXT