ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ 
ರಾಜ್ಯ

ಹಾಸನ: ಕೇಂದ್ರ ಸರ್ಕಾರದಿಂದ ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ: ಹರ್ದೀಪ್ ಸಿಂಗ್ ಪುರಿ

ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಹೇಳಿದರು. 

ಹಾಸನ: ಇಂಧನ ವಲಯದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಹೇಳಿದರು. 

ನಗರದ ಸಂತೆ ಪೇಟೆ ಕಾರಾಗೃಹದ ಎದುರು ಇರುವ ಎಚ್.ಪಿ ಪೆಟ್ರೋಲ್ ಬಂಕ್ ಬಳಿ ಇಂದು CNG ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಗ್ಯಾಸ್ ಸಂಪರ್ಕದಲ್ಲಿ ಜಪಾನ್ ದೇಶ ಮುಂಚೂಣಿಯಲ್ಲಿದೆ, ಅಲ್ಲದೆ ಅವರು ಇತರ ದೇಶಗಳಲ್ಲೂ ಅದನ್ನು ವಿಸ್ತರಿಸುವ ಸಲುವಾಗಿ ಭಾರತ ವಿವಿಧ ದೇಶಗಳಲ್ಲಿ ಹೂಡಿಕೆ ಮಾಡಲು ಮುಂದಾಗಿರುವುದು ಶ್ಲಾಘನೀಯ ಎಂದರು.

ಇಂಧನ ವಲಯದಲ್ಲಿ ಪರಿಸರಕ್ಕೆ ಪೂರಕವಾದ ಸಿಎನ್ ಜಿ ಬಳಕೆ ಹಾಗೂ ಅಳವಡಿಕೆಯಲ್ಲಿ ಹಾಸನದ ಜನರೂ ಉತ್ಸುಕರಾಗಿದ್ದು, ಸಿಎನ್ ಜಿ ಅಳವಡಿಸಿಕೊಳ್ಳಲು ಇಚ್ಚಿಸುವವರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಂದ ಸಾಕಷ್ಟು ಅನುಕೂಲಗಳಿದ್ದು, ಅವುಗಳನ್ನು ಬಳಸಿಕೊಳ್ಳುವಂತೆ ಕರೆ ನೀಡಿದರು

ಅತೀ ಶೀಘ್ರದಲ್ಲಿ ಹಾಸನದಲ್ಲಿ ಮನೆ ಮನೆಗೆ ಸಿಎನ್ ಜಿ ಸಂಪರ್ಕ ನೀಡಲು ಯೋಜಿಸಲಾಗಿದೆ ಜೊತೆಗೆ ಸುಮಾರು 100 ಡಿಜಿಟಲ್ ಸಿಎನ್ ಜಿ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಲಾಗಿದೆ ಜನರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಇದಕ್ಕೂ ಮುನ್ನಾ ಹಳೇಬಿಡಿನ ಯುನೆಸ್ಕೋ ವಿಶ್ವ ಪಾರಂಪರಿಕಾ ತಾಣಗಳ ಪಟ್ಟಿಗೆ ಸೇರ್ಪಡೆಯಾದ ಹೊಯ್ಸಳೇಶ್ವರ ದೇವಾಲಯಕ್ಕೆ ಭೇಟಿ ನೀಡಿದ ಹರ್ದಿಪ್ ಸಿಂಗ್ ಪುರಿ, ಶಿಲ್ಪಕಲೆ ವೀಕ್ಷಿಸಿ ದೇವರ ದರ್ಶನ ಪಡೆದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT