ಕೋವಿಡ್-19 ಸೋಂಕು (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಇಂದು 201 ಮಂದಿಗೆ ಕೊರೋನಾ ಪಾಸಿಟಿವ್, ಒಂದು ಸಾವು!

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬುಧವಾರ 201 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ರಾಜ್ಯದಲ್ಲಿ ಇಂದು ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!

UPI ಪಾವತಿಗಳಿಗೆ ಶುಲ್ಕ ವಿಧಿಸಲ್ಲ: ಯಾರಿಗೆ MDR ವಿಧಿಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದ ಕೇಂದ್ರ ಸರ್ಕಾರ!

ಟೆಸ್ಟ್ ಪಂದ್ಯದ ಕೊನೆಯ ಓವರ್​ನಲ್ಲಿ 6, 6, 0, 6, 6 ಸಿಡಿಸಿದ ಗುರ್ನೂರ್ ಬ್ರಾರ್; ಗಂಭೀರ್ ಚಲ್ಲಾಳೆ, Video!