ಹೊತ್ತಿ ಉರಿದ ಸರ್ಕಾರಿ ಬಸ್ 
ರಾಜ್ಯ

ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್, ಸವಾರ ಸ್ಥಳದಲ್ಲೇ ಸಾವು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ನಡೆದಿದೆ.

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ನಡೆದಿದೆ.

ವಿಜಯಪುರ - ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ಈ ಅಪಘಾತ ಸಂಭವಿಸಿದ್ದು, ಮೋರಟಗಿ ಕಡೆಯಿಂದ ಸಿಂದಗಿ ಕಡೆ ತೆರಳುತ್ತಿದ್ದ ಬಸ್ ಎದುರಿನಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಬಸ್ ಸಂಪೂರ್ಣ ಹೊತ್ತಿ ಉರಿದಿದೆ. ಬಸ್ ಪ್ರಯಾಣಿಕರು ತಕ್ಷಣ ಕೆಳಗೆ ಇಳಿಯುವ ಮೂಲಕ ಅಪಾಯದಿಂದ ಪಾರಾಗಿದ್ದಾರೆ. ಆದರೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಬಸ್ಸಿನ ಕೆಳಗೆ ಸಿಲುಕಿದ ಪರಿಣಾಮ ಪೆಟ್ರೋಲ್ ಸೋರಿಕೆಯಾಗಿ ಏಕಾಏಕಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!